19.8 C
Bengaluru
Monday, December 23, 2024

ರಾಷ್ಟ್ರೀಯ ಯುವ ದಿನದಂದು ಯುವನಿಧಿ ಯೋಜನೆಗೆ ಚಾಲನೆ: ಮಧು ಬಂಗಾರಪ್ಪ

#Launch of #Youth Fund Scheme # National Youth Day# Madhu Bangarappa

ಬೆಂಗಳೂರು;ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನವಾದ(YOUTHDAY) ಜ. 12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ(Youth Fund)’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್‌. ಮಧು ಬಂಗಾರಪ್ಪ ಹೇಳಿದ್ದಾರೆ. ಮಲೆನಾಡಿನ ಶಿವಮೊಗ್ಗ ನಗರ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ 5 ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಸಜ್ಜಾಗಿದೆ,ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್‌( ಹಳೆ ಜೈಲ್‌ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. 85 ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ.

ಯುವನಿಧಿ ಯೋಜನೆ ಉದ್ಘಾಟನಾ ಸಮಾರಂಭದ ಕುರಿತು ಮಾಹಿತಿ ಮಾತನಾಡಿದ ಅವರು ಪದವಿ, ಡಿಪ್ಲೊಮಾ ಉತ್ತೀರ್ಣರಾದ ನಂತರ ಆರು ತಿಂಗಳಲ್ಲಿ ಉದ್ಯೋಗ ದೊರೆಯದಿದ್ದವರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದರು.ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೆ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

Related News

spot_img

Revenue Alerts

spot_img

News

spot_img