#Life #Threats #writers #CCB #arested #Accused
ಬೆಂಗಳೂರು ಸೆ.30:ಸಾಹಿತಿಗಳಿಗೆ ಜೀವ ಬೆದರಿಕೆಯೊಡ್ಡಿದ ಆರೋಪಿಯೊಬ್ಬನನ್ನು CCB ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಶಿವಾಜಿರಾವ್ ಜಾಧವ್ ಎಂಬಾತನೇ ಜೀವ ಬೆದರಿಕೆಯೊಡ್ಡಿರುವುದಾಗಿ ಬಾಯಿಬಿಟ್ಟಿದ್ದಾನೆ. ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರಿಂದ 5 ಸಾಹಿತಿಗಳಿಗೆ 7 ಬಾರಿ ಬೆದರಿಕೆ ಹಾಕಿರುವುದಾಗಿ ಹೇಳಿದ್ದಾನೆ ಲಲಿತಾ ನಾಯಕ್, ಕುಂ. ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್ ಸೇರಿ ಇತರೆ ಸಾಹಿತಿಗಳಿಗೆ ಬೆದರಿಕೆಯೊಡ್ಡಿದ್ದಾನೆಂದು ವಿಚಾರಣೆ ವೇಳೆ ಬಹಿರಂಗವಾಗಿದೆ.ಕೆಲ ಸಾಹಿತಿಗಳು ಹಿಂದೂ ಧರ್ಮದ ವಿರೋಧಿಗಳು ಹೀಗಾಗಿ ಬೆದರಿಕೆ ಪತ್ರ ಬರೆದೆ ಎಂದು ಶಿವಾಜಿರಾವ್ ಹೇಳಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್ ಅವರ ಹಿನ್ನೆಲೆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.2 ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಖ್ಯಾತಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್, ವಸುಂಧರ ಭೂಪತಿ ಅವರಿಗೆ ಅನಾಮ ಧೇಯ ಹೆಸರಿ ನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಪೊಲೀಸರು ಈ ಎಲ್ಲಾ ಬೆದರಿಕೆ ಪತ್ರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಿದ್ದರು