30.2 C
Bengaluru
Sunday, February 25, 2024

ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ ಅತೀಕ್ ವರ್ಗಾವಣೆ

ಬೆಂಗಳೂರು ಮೇ. 31 ;ವಿಧಾನಸಭೆ ಚುನಾವಣೆ ಮುಗಿದು ಹೊಸದಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುತ್ತಿದ್ದಂತೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯೂ ಜೋರಾಗಿದೆ.ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ. ಹಿರಿಯ ಐಎಎಸ್ ಅಧಿಕಾರಿ ಎಲ್‌. ಕೆ. ಅತೀಕ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಎಲ್.ಕೆ ಅತೀಕ್ ಅವರನ್ನು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.ಅವರು ಜೂನ್ 30 ರಿಂದ ಅಧಿಕಾರ ವಹಿಸಿಕೊಳ್ಳುತ್ತಾರೆ.ಪ್ರಸ್ತುತ ಆ ಹುದ್ದೆಯಲ್ಲಿರುವ ಪ್ರಸಾದ್ ಐ.ಎಸ್.ಎನ್ ಅವರು ಜೂನ್ 30 ರಂದು ನಿವೃತ್ತರಾಗಲಿದ್ದಾರೆ.ಎಲ್.ಕೆ ಅತೀಕ್ ಅವರನ್ನು ಜೂನ್ 30ರವರಗೆ ಅಂದರೆ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವವರೆಗೂ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಯ ಜೊತೆಗೆ ನಿಯೋಜಿಸಲಾಗಿದೆ.

Related News

spot_img

Revenue Alerts

spot_img

News

spot_img