Revenue Facts

ಆ. 14ರೊಳಗೆ ಕರ್ನಾಟಕದಲ್ಲಿ 1300 ಅನಧಿಕೃತ ಶಾಲೆಗಳಿಗೆ ಬೀಗ

ಆ. 14ರೊಳಗೆ ಕರ್ನಾಟಕದಲ್ಲಿ 1300 ಅನಧಿಕೃತ ಶಾಲೆಗಳಿಗೆ ಬೀಗ

#lockdown #unofficial #school #karnataka


ಬೆಂಗಳೂರು ಆ.11;ರಾಜ್ಯದಲ್ಲಿ ಬರೋಬ್ಬರಿ 1,300 ಅನಧಿಕೃತ ಶಾಲೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಕೇಳಿದ ಬೆನ್ನಲ್ಲೇ ಕರ್ನಾಟಕಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ನಡೆಸುತ್ತಿದ್ದಲ್ಲಿ ಅಂತಹ ಶಾಲೆಗಳನ್ನು ಆ. 14 ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಆ. 16 ಒಳಗಾಗಿ ದೃಢೀಕೃತ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಜ್ಞಾಪನಾ ಪತ್ರ ಹೊರಡಿಸಿರುವ ಅವರು, ನೋಂದಣಿ, ಅನುಮತಿ ಪಡೆಯದೆ ನಡೆಸುತ್ತಿರುವ ಶಾಲೆಗಳನ್ನು ನಿಯಮಾನುಸಾರ ಮುಚ್ಚಬೇಕು. ಆ.14ರ ಒಳಗಾಗಿ ಮುಚ್ಚಿ ಪತ್ರಿಕಾ ಪ್ರಕಟಣೆ ನೀಡಬೇಕು. ಜತೆಗೆ ನೋಂದಣಿ ಇಲ್ಲದೆ ಅನಧಿಕೃತವಾಗಿ ಉನ್ನತೀಕರಿಸಿದ ತರಗತಿಗಳನ್ನು ಆ.14ರೊಳಗೆ ರದ್ದುಪಡಿಸಬೇಕು. ಜತೆಗೆ ರಾಜ್ಯ ಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿ ಪಡೆದು ಅನಧಿಕೃತವಾಗಿ ಕೇಂದ್ರ ಪಠ್ಯದಲ್ಲಿ ಬೋಧಿಸುತ್ತಿರುವವರು, ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆ ಹೊಂದಿದ ಬಳಿಕವೂ ರಾಜ್ಯ ಪಠ್ಯಕ್ರಮ ಮುಂದುವರೆಸುತ್ತಿರುವವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

Exit mobile version