ನವದೆಹಲಿ : ಲೋಕಸಭಾ ಚುನಾವಣೆಯ(Loksabha Election) ಮೊದಲ ಹಂತದ ಅಧಿಸೂಚನೆ ಇಂದು ಹೊರಬೀಳಲಿದೆ, ಚುನಾವಣಾ ಹಬ್ಬಕ್ಕೆ ಇಂದು ಚಾಲನೆ ಸಿಗಲಿದೆ. ಏಪ್ರಿಲ್. 19 ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ(Submission of nomination papers) ಇಂದಿನಿಂದ ಆರಂಭವಾಗಲಿದೆ. ಮಾರ್ಚ್. 27ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾರ್ಚ್. 28 ರಂದು ಪರಿಶೀಲನೆ ನಡೆಯಲಿದೆ.ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಮಾರ್ಚ್ 20 ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.ಮೊದಲ ಹಂತದಲ್ಲಿ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 89, ಮೂರನೇ ಹಂತದಲ್ಲಿ 94, ನಾಲ್ಕನೇ ಹಂತದಲ್ಲಿ 96, ಐದನೇ ಹಂತದಲ್ಲಿ 49, ಆರನೇ ಹಂತದಲ್ಲಿ 57 ಹಾಗೂ ಏಳನೇ ಹಂತದಲ್ಲಿ 57 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.