22.9 C
Bengaluru
Friday, July 5, 2024

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ:

ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆದಿದೆ.ಬೆಂಗಳೂರು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿನಡೆಸಿದ್ದಾರೆ,ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ

ಎನ್​​.ವೆಂಕಟೇಶಪ್ಪ ತಾ.ಪಂ. EO ಗೆ ಸೇರಿದ 5 ಮನೆಗಳ ಮೇಲೆ ದಾಳಿ

ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತಾ.ಪಂ. EO ಎನ್​​.ವೆಂಕಟೇಶಪ್ಪಗೆ ಸೇರಿದ 5 ಮನೆಗಳ ಮೇಲೆ ರೇಡ್ ಆಗಿದೆ. ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ 2 ಕಡೆ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ವೆಂಕಟೇಶಪ್ಪ ನವರು ಕಳೆದ 8 ವರ್ಷದಿಂದ ಬಂಗಾರಪೇಟೆ ತಾ.ಪಂ. EO ಆಗಿ ಕೆಲಸ ಮಾಡುತ್ತಿದ್ದು 2 ದಿನದ ಹಿಂದಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆ ಆಗಿದ್ದರು.

ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ,ನಿವೃತ್ತ ಡಿಸಿಎಫ್ ನಾಗರಾಜ್ ಮನೆ ಮೇಲೆ ದಾಳಿ

ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಹಾಗೂ ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ.ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ,ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ.ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕ ಕಾಲಕ್ಕೆ ರೇಡ್ ಆಗಿದೆ

BBMP ಸಹಾಯಕ ಇಂಜಿನಿಯರ್ ಟಿ.ಹನುಮಂತರಾಯ ಮನೆ ಮೇಲೆ ದಾಳಿ

ಬೆಂಗಳೂರಿನ BBMP ಎಇಇ ಟಿ.ಹನುಮಂತರಾಯ ಮನೆ ಮೇಲೆ ದಾಳಿ ನಡೆದಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್​ ಹೌಸ್ ಮೇಲೆ ಲೋಕಾಯುಕ್ತ ಎಸ್​ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ.

ಬೀದರ್​​’ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್’​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ

Related News

spot_img

Revenue Alerts

spot_img

News

spot_img