Revenue Facts

Lokayukta: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್​ ಕಲೆಕ್ಟರ್​

Lokayukta: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್​ ಕಲೆಕ್ಟರ್​

ಹಿರಿಯೂರು: ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಅನ್ನು ಲೋಕಾಯುಕ್ತ(Lokayukta) ಪೊಲೀಸರು ಬಂಧಿಸಿದ್ದಾರೆ.ಲಂಚಕ್ಕೆ ಬೇಡಿಕೆಯಿಟ್ಟು ಮನೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರ ಮನೆಯ ಬಿಲ್ ಮಂಜೂರು ಮಾಡಿ ಕೊಡಲು 30 ಸಾವಿರ ಲಂಚ ಕೇಳಿದ್ದರು. ಇದರಲ್ಲಿ 25 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆಹಿರಿಯೂರು ತಾಲ್ಲೂಕಿನ ಹೊಸುಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಭಾನುವಾರ (ಜನವರಿ 14) ನಡೆದಿದೆ.ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವರ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿ ಕುರಿತು ತನಿಖೆ ಮುಂದುವರೆದಿದೆ.

Exit mobile version