27.6 C
Bengaluru
Friday, September 20, 2024

ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು

#Lokayukta #officials # shocked # corrupt #officials

ಮಂಡ್ಯ;ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದ PWD ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಅವರ ಮಾವನ ಮನೆ, ನಾಗಮಂಗಲದ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ತರೀಕೆರೆ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಹಾಸನದಲ್ಲಿ ಫುಡ್‌ಇನ್ಸ್‌ಪೆಕ್ಟರ್ ಜಗನ್ನಾಥ್ ಮತ್ತು ಅವರ ಸಹೋದರ ಕಿರಣ್ ನಿವಾಸದಲ್ಲೂ ಶೋಧ ನಡೆಯುತ್ತಿದೆ.ಮಂಡ್ಯ ಮೈಸೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು, ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರಿನ ವಾಣಿಜ್ಯ ಅಧಿಕಾರಿ ನೇತ್ರಾವತಿ, ಮಂಡ್ಯ ಪಿಡಬ್ಲ್ಯು ಡಿ ಇಇ ಹರ್ಷ, ಮೈಸೂರಿನ ಮೂಡಾ ಇಂಜಿನಿಯರ್ ಯಜ್ಞೇಂದ್ರ, ಹಾಸನದ ಫುಡ್ ಇನ್ಸ್ ಪೆಕ್ಟರ್ ಜಗನ್ನಾಥ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಅಧಿಕಾರಿಗಳ ಆಪ್ತರು, ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Related News

spot_img

Revenue Alerts

spot_img

News

spot_img