ರಾಯಚೂರು ;ರಾಯಚೂರು ನಗರಸಭೆ ಎಂಜಿನಿಯರ್ ಕಾಮಗಾರಿ ಬಿಲ್ ಪಾವತಿಗೆ 45 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದುಟ್ರ್ಯಾಕ್ಟರ್ ಮಾಲೀಕ ಭಗತ್ ಸಿಂಗ್ ಅವರಿಂದ ಮಲ್ಲಿಕಾರ್ಜುನ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಬಳಿಕ ಭಗತ್ ಸಿಂಗ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಭಗತ್ ಸಿಂಗ್ ಅವರ ದೂರಿನ ಮೇರೆಗೆ ಲೋಕಾಯುಕ್ತ ಎಸ್‌ಪಿ ಡಾ.ರಾಮ್ ಅರಸಿದ್ದಿ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಲಂಚಕೋರ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ,ಅಧಿಕಾರಿಗಳ ತಂಡದಲ್ಲಿ ನಾಗರಾಜ್, ಗುರುಲಿಂಗಪ್ಪಗೌಡ ಪಾಟೀಲ್ ಇದ್ದರು.45 ಸಾವಿರ ರೂಪಾಯಿಯನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ,
ಮತ್ತೊಂದು ಪ್ರಕರಣದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು 1500 ರೂ ಲಂಚ ಪಡೆಯುತ್ತಿದ್ದಾಗ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ನಾಗರಾಜು ಎಂಬುವವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ತನಿಖೆ ಮಾಡಿದಾಗ ಲಂಚ ಪ್ರಕರಣ ಬೆಳಕಿಗೆ ಬಂದಿದೆ.