31.4 C
Bengaluru
Wednesday, April 23, 2025

Lokayukta Raid : ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾ ಬಲೆಗೆ

ತುಮಕೂರು, ಡಿ.22:ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ವೈದ್ಯ ಹರಿಪ್ರಸಾದ್‌ ಲೋಕಾಯುಕ್ತ(lokayukta) ಬಲೆಗೆ ಬಿದ್ದಿದ್ದಾರೆ. ಹನುಮಂತಪ್ಪ ಎಂಬುವವರ ಪತ್ನಿಗೆ ಹೆರಿಗೆ ಮಾಡಿಸಲು ಮೂರು ಸಾವಿರ ರೂಪಾಯಿ ಲಂಚ(Bribe) ಪಡೆಯುತ್ತಿದ್ದರು. ಇದೇ ವೇಳೆ ಜಿಲ್ಲೆಯ ಲೋಕಾಯುಕ್ತ ಎಸ್ಪಿ ವಲೀಬಾಷಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಹರಿಪ್ರಸಾದ್ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು 3 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಹಿಳೆ ಸಂಬಂಧಿಯೊಬ್ಬರು ದೂರು ನೀಡಿದ್ದರು.ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,ರೆಡ್​ಹ್ಯಾಂಡ್​ ಆಗಿ ವೈದ್ಯ ಸಿಕ್ಕಿಬಿದ್ದಿದ್ದಾನೆ. ನಗದು ಸಮೇತ ಆರೋಪಿ ವೈದ್ಯರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ತುಮಕೂರು(Tumkur) ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲೋಕಾಯುಕ್ತ ಇನ್ಸ್‍ಪೆಕ್ಟರ್ ರಾಮ ರೆಡ್ಡಿ, ಸಲೀಂ ಅಹ್ಮದ್ ಹಾಗೂ ಶಿವರುದ್ರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಈ ಕುರಿತು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Related News

spot_img

Revenue Alerts

spot_img

News

spot_img