24.2 C
Bengaluru
Friday, September 20, 2024

Lokayukta Raid: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

#Lokayukta Raid #Forest department #official fell # Lokayukta’s trap # taking bribe

ಕುಂದಾಪುರ;ಅರಣ್ಯ ಇಲಾಖೆ(forestdepartment) ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ(Bribe) ಸ್ವೀಕರಿಸುತ್ತಿದ್ದ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಪೂಜಾರಿ ಲೋಕಾಯುಕ್ತ ವಶದಲ್ಲಿರುವ ಸಿಬ್ಬಂದಿ.ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.407 ವಾಹನವೊಂದು ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜುನಾಥ್ ಪೂಜಾರಿ ಲಂಚದ ಬೇಡಿಕೆಯಿಟ್ಟಿದ್ದರು. ಮಾತುಕತೆ ಪ್ರಕಾರ ಕಚೇರಿ ವೇಳೆಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ದಾಳಿ ನಡೆದಿದೆ.ಆಲೂರಿನ ಆದಿತ್ಯ ಎಂಬವರ ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದನು.ಆದಿತ್ಯ ಲಂಚ ನೀಡಲು ಒಪ್ಪದ ಈ ಬಗ್ಗೆ ಉಡುಪಿ ಲೋಕಾಯುಕ್ತ(Lokayukta) ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಮಂಜುನಾಥ್ ಪೂಜಾರಿಯನ್ನುಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ಹ್ಯಾಂಡಾಗಿ ಬಂಧಿಸಿದ್ದಾರೆ,ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ಈ ಕಾರ್ಯಾಚರಣೆ ನಡೆಸಿದ್ದಾರೆ.

ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿ ಲೋಕಾಯುಕ್ತ ಬಲೆಗೆ

ಬೆಳಗಾವಿ;ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.ಮಂಜುನಾಥ್ ಅಂಗಡಿ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ(SDC),ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಸಂಬಂಧ ರವಿ ಅಜ್ಜಿ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ,ಈ ವೇಳೆ ಮಂಜುನಾಥ್​​ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ SP ಹಣಮಂತರಾಯ, DYSP ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ PSI ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ದಾಳಿ ನಡೆಸಿತ್ತು.

 

Related News

spot_img

Revenue Alerts

spot_img

News

spot_img