ಬೆಂಗಳೂರು;ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಾವೇರಿಯ RFOಗಳಾದ ಪರಮೇಶ್ವರಪ್ಪ ಪೇರಲನವ ಹಾಗೂ ನ್ಯಾಮತಿ ಮಾಲತೇಶ್ ಅವರ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಹಾಸನದ KPTCL ಜೂನಿಯರ್ ಇಂಜಿನಿಯರ್ ಎಚ್.ಇ. ನಾರಾಯಣ, ಚಿತ್ರದುರ್ಗದ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನಲ್ಲೂ(banglore) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್
ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ(Lokayukta) ಶಾಕ್ ಕೊಟ್ಟಿದ್ದಾರೆ. ಕೆ.ಆರ್.ಪುರಂ ARO ಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ,
ಹಾಸನ: ಹಾಸನದ(Hassan) ಕೆಪಿಟಿಸಿಎಲ್(KPTCL) ಜೂನಿಯರ್ ಇಂಜಿನಿಯರ್ ನಾರಾಯಣ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ(Lokayukta) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು ದಾಖಲೆ ತನಿಖೆ ಮುಂದುವರಿಸಿದ್ದಾರೆ.
ರಾಯಚೂರಿನಲ್ಲಿ(Raichur) ಲೋಕಾಯುಕ್ತ(Lokayukta) ಅಧಿಕಾರಿಗಳ ದಾಳಿ ನಡೆದಿದ್ದು, ನಿರ್ಮಿತಿ ಕೇಂದ್ರದ(Nirmidhi Kendra) ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಲಾಗಿದೆ. ಶರಣಬಸವ ಪಟ್ಟೇದ್ ಅವರ ಗಂಗಾಪರಮೇಶ್ವರಿ ಕಾಲೋನಿಯಲ್ಲಿನ ಮನೆ ಸೇರಿ 4 ಕಡೆ ದಾಳಿಯಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಮನೆ, ಕಚೇರಿ, ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ. ಲಿಂಗಸುಗೂರಿನಲ್ಲಿನ ಜಮೀನು ಸೇರಿ ಆಸ್ತಿಗಳ ಪರೀಕ್ಷೆಯನ್ನು ಎಸ್ಪಿ ಡಾ. ರಾಮ್. ಎಲ್. ಅರಸಿದ್ದಿ ನೇತೃತ್ವದ ತಂಡ ನಡೆಸಿದೆ.
ಬಳ್ಳಾರಿ(Ballary) ತಾಲೂಕು ಕಚೇರಿಯಲ್ಲಿ ಹಾಗೂ ಗುಗ್ಗರ ಹಟ್ಟಿಯ ಮನೆಯ ಮೇಲೆ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ, ಹೊಸಪೇಟೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಕಂದಾಯ ನಿರೀಕ್ಷಕ(Inspector of Revenue) ಮಂಜುನಾಥ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ(Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆ ಸಿಪಿಐ ಸುರೇಶ್ ಬಾಬು ನೇತೃತ್ವದಲ್ಲಿ ದಾಖಲೆ ಪರಿಶೀಲನೆ ಮುಂದುವರಿದಿದೆ.
ಬೀದರ(Bidar) ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ(EE) ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ(lokayukta) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು(documents) ಪರಿಶೀಲಿಸಿದ್ದಾರೆ.
ಹಾವೇರಿ(Haveri) ಜಿಲ್ಲೆಯ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಾವೇರಿ ಆರ್ ಎಫ್ ಒ(RFO) ಪರಮೇಶಪ್ಪ ಅವರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.ನ್ಯಾಮತಿ RFO ಮಾಲತೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ(lokayukta) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.\
ಚಿತ್ರದುರ್ಗದಲ್ಲಿ(Chitradurga) ಬೆಳಗ್ಗೆ ಲೋಕಾಯುಕ್ತ(lokayukta) ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ(SP) ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ತನಿಖೆ ನಡೆಸಿದ್ದಾರೆ.