#Lokayukta Trap #Chief Manager# BESCOM #Bengaluru
ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ(Chief Manager of Electricity Supply Company Limited) ಮತ್ತು ಅವರ ಚಾಲಕ ಲೋಕಾಯುಕ್ತ(lokayukta) ಬಲೆಗೆ ಬಿದ್ದಿದ್ದಾರೆ.ಕಾರ್ ಚಾಲಕನ ಮೂಲಕ 7.5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಗುತ್ತಿಗೆದಾರ(Contractor) ಪ್ರತಾಪ್ ಎಂಬುವರಿಂದ ಲಂಚ(bribe) ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಸ್ಕಾಂ(Bescom) ಮುಖ್ಯ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಎಂ.ಎಲ್. ಎಂಬುವರು ತಮ್ಮ ಚಾಲಕ ಮುರಳಿಕೃಷ್ಣ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಸರಬರಾಜುನಿಂದ ಕೈಗಾರಿಕಾ ವಿದ್ಯುತ್ ಸರಬರಾಜಿಗೆ ಬದಲಾವಣೆ ಮಾಡಿ, ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್ 7.5 ಲಕ್ಷ ರು.ಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುತ್ತಿಗೆದಾರ ಪ್ರತಾಪ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.