Revenue Facts

ಲಂಚ ಪಡೆಯುತ್ತಿದ್ದ ಗ್ರಾ.ಪಂ ಪಿಡಿಓ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ಗ್ರಾ.ಪಂ ಪಿಡಿಓ ಅಧಿಕಾರಿ ಲೋಕಾಯುಕ್ತ ಬಲೆಗೆ

#Lokayukta #Grampanchyat #PDO #tumkur

ಬೆಂಗಳೂರುಏಪ್ರಿಲ್ 29;ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ತುಮಕೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಎಂಬುವರು, ಇ-ಖಾತಾ ಮಾಡಿಕೊಡಲು ಭೈರೇಶ್ ಎಂಬುವರಿಗೆ 8,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು,ದೊಡ್ಡ ತುಮಕೂರು ಗ್ರಾಮ ಪಂಚಾಯ್ತಿಯ ಪಿಡಿಓ ಒಬ್ಬರು ಇ-ಖಾತ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 8,000 ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಭೈರೇಶ್ ಎಂಬುವರು ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು,ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಕೇಳಿದ್ದಂತ 8,000 ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯನ್ನುರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ,ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Exit mobile version