20.2 C
Bengaluru
Thursday, February 6, 2025

ಏಳು ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ ಟೇಬಲ್

ಕಲಬುರಗಿ;ಕಲಬುರಗಿ ಜಿಲ್ಲಾ ಸೆನ್ ಪೊಲೀಸ್(CEN) ಠಾಣೆಯ ಕಾನ್ಸ್​ಟೇಬಲ್ ವೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮುಕ್ಕಲಪ್ಪ ನೀಲಜೇರಿ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್.ಸೆನ್ ಪೊಲೀಸ್ ಠಾಣೆಯಲ್ಲಿ ಸಂಜನಾ ಬೀರಪ್ಪಾ ಎಂಬುವವರ ಬಳಿ ಮುಕ್ಕಲಪ್ಪ ನಿಲಜೇರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು ,ಸಂಜನಾ ಬೀರಪ್ಪ ಎಂಬುವವರಿಂದ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ,ಸಧ್ಯ ಕಾನ್ಸ್ ಟೇಬಲ್ ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ಲೋಕಾಯುಕ್ತ ಎಸ್​.ಪಿ ಎಆರ್ ಕರ್ನೂಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸದ್ಯ ಕಾನ್ಸಟೇಬಲ್ ಮುಕ್ಕಲಪ್ಪನನ್ನ ಬಂಧಿಸಲಾಗಿದೆ.

Related News

spot_img

Revenue Alerts

spot_img

News

spot_img