ಬೆಂಗಳೂರು;2024ರ ಲೋಕಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಆಯುಕ್ತ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ.ಭಾರತದಾದ್ಯಂತ ಕೇಂದ್ರ ಚುನಾವಣಾ ಆಯೋಗವು 19 ಏಪ್ರಿಲ್ 2024 ರಿಂದ 01 ಜೂನ 2024 ರವರೆಗೆ ಏಳು ಹಂತಗಳಲ್ಲಿ ಚುನಾವಣೆಗಳನ್ನು ನಡೆಸಲಿದೆ ಮತ್ತು 04 ಜೂನ 2024 ರಂದು ಫಲಿತಾಂಶಗಳನ್ನು ಘೋಷಿಸಲಾಗುವುದು.ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎಪ್ರೀಲ್ 26 ಮತ್ತು ಮೇ 07 ಸೇರಿದಂತೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಹಾಗೂ ಎರಡನೇ ಹಂತದಲ್ಲಿ ುತ್ತರ ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಸಲಾಗುವುದು.ಲೋಕಸಭಾ ಚುನಾವಣೆಗೆ 55 ಲಕ್ಷ EVM ಬಳಸಲಾಗುತ್ತಿದ್ದು, 10.5 ಲಕ್ಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿ, 1.8 ಕೋಟಿ ಯುವಕರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ದೇಶದಲ್ಲಿ ಒಟ್ಟು 97 ಕೋಟಿ ಮಂದಿ ಮತದಾರರಿದ್ದು, 49.7 ಕೋಟಿ ಪುರುಷರು, 47 ಕೋಟಿ ಮಹಿಳಾ ಮತದಾರರಿದ್ದಾರೆ ಎಂದಿದ್ದಾರೆ.ದೇಶದಲ್ಲಿ 96.88 ಕೋಟಿ ಮತದಾರರಿದ್ದಾರೆ ಎಂದು ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಇದು ಅಮೆರಿಕ & ಆಸ್ಟ್ರೇಲಿಯಾದಂತಹ ದೇಶಗಳ ಜನಸಂಖ್ಯೆಗಿಂತ ಹೆಚ್ಚು. ದೇಶದಲ್ಲಿ ಚುನಾವಣೆಗಾಗಿ 10.5 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 1.50 ಕೋಟಿ ಮತಗಟ್ಟೆ ಸಿಬ್ಬಂದಿ & ಭದ್ರತಾ ಅಧಿಕಾರಿಗಳು ಕರ್ತವ್ಯದಲ್ಲಿ ಭಾಗವಹಿಸಲಿದ್ದಾರೆ. 55 ಲಕ್ಷ ಇವಿಎಂಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ. ಜೂನ್ 16ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಲೋಕ ಚುನಾವಣೆಯಲ್ಲಿ ಅಕ್ರಮ & ಕಪ್ಪು ಹಣ ವರ್ಗಾವಣೆ ನಡೆಸುತ್ತಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.