Revenue Facts

ಲೋಕಸಭೆ ಚುನಾವಣೆ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ;ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದ ಮುಖಂಡರು ವರ್ಚುಯಲ್ ಆಗಿ ಸಭೆ ನಡೆಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಕ್ಕೂಟದ ಮುಖ್ಯಸ್ಥರನ್ನಾಗಿ ನೇಮಕ ಆಯ್ಕೆಮಾಡಲಾಗಿದೆ. 18 ವಿಪಕ್ಷಗಳ ಪೈಕಿ 14 ಪಕ್ಷಗಳ ಸದಸ್ಯರು ಪಾಲ್ಗೊಂಡಿದ್ದರು. ಆದರೆ, ಸಂಯೋಜಕರ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಲು ನಿತೀಶ್ ಕುಮಾರ್ ನಿರಾಕರಿಸಿದರು.ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಸಭೆಗೆ ಹಾಜರಾಗಿರಲಿಲ್ಲ. ಸಭೆ ಮುಗಿದ ಬಳಿಕ ಬಿಹಾರ ಸಚಿವ ಸಂಜಯ್ ಝಾ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.ಇದೇ ವೇಳೆ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದರು. ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನ ಮುಕುಲ್ ವಾಸ್ನಿಕ್ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿ ಮಾಡಿದ್ದರು.ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಆದಷ್ಟು ಶೀಘ್ರ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜೊತೆಯಾಗಿ ಚುನಾವಣಾ ರ್‍ಯಾಲಿ ನಡೆಸುವುದು ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಸಾಧ್ಯವಾಗಲಿದೆ ಎನ್ನುವ ಒಲವು ವ್ಯಕ್ತಪಡಿಸಲಾಗಿದೆ.

Exit mobile version