26.4 C
Bengaluru
Wednesday, December 4, 2024

ಮಾರ್ಚ್ 16ರ ಮಧ್ಯ ರಾತ್ರಿಯಿಂದಲೇ ಲಾರಿ ಮುಷ್ಕರ;ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು, ಮಾ. 16 :ವಾಣಿಜ್ಯ ವಾಹನಗಳ ಎಫ್‌ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಹೊಂದಿರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರಲು ಹೊರಡಿಸಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಇಂದು ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ.ಅಲ್ಲದೆ ಬೆಂಗಳೂರು ನಗರದಲ್ಲಿ ಸರಕು ಸಾಗಾಣೆ ವಾಹನಗಳ ಪ್ರವೇಶ ರದ್ದುಪಡಿಸಿರುವುದನ್ನು ಸಂಘ ಖಂಡಿಸಿದ್ದು, ಈ ಕಾರಣಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದಾಗಿ ಇಂದು ಮಧ್ಯರಾತ್ರಿಯಿಂದ ಸರಕು ಸಾಗಾಣಿಕೆ ವಾಹನಗಳು ರಸ್ತೆಗಿಳಿಯದ ಕಾರಣ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ, ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ 16ರ ಮಧ್ಯರಾತ್ರಿಯಿಂದ ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ನಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.ಹಾಲು, ತರಕಾರಿ, ಹಣ್ಣು ಮೊದಲಾದವುಗಳ ಸಾಗಾಣಿಕೆ ಮೇಲೆ ಈ ಮುಷ್ಕರ ಪರಿಣಾಮ ಬೀರುವ ಕಾರಣ ಜನಸಾಮಾನ್ಯರ ದೈನಂದಿನ ಜೀವನಕ್ಕೆ ಅಡಚಣೆಯಾಗಬಹುದು. ಇದರ ಮಧ್ಯೆ ಮುಷ್ಕರ ಆರಂಭಕ್ಕೂ ಮುನ್ನವೇ ಮುಷ್ಕರ ನಿರತರ ಬೇಡಿಕೆ ಈಡೇರಿಕೆಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

ಲಾರಿ ಮಾಲೀಕರ ಸಂಘದ ಬೇಡಿಕೆಗಳು;*ದ್ವಿಚಕ್ರ ಮತ್ತು ಮಂದಗತಿಯಲ್ಲಿ ಚಲಿಸುವ ಟ್ರಾಕ್ಟರ್ ಆಟೋರಿಕ್ಷಾಗಳ ಓಡಾಟ ಬೆಂಗಳೂರು- ಮೈಸೂರು ರಸ್ತೆಯಲ್ಲಿನಿಷೇಧಿಸಬೇಕು,ನೈಸ್ ರಸ್ತೆಯಲ್ಲಿ ಕಳೆದ 10 ವರ್ಷಗಳಿಂದ ಹೆಚ್ಚು ಟೋಲ್ ಹಣ ತೆಗೆದುಕೊಳ್ಳುವದನ್ನುತಡೆಯಬೇಕು,ಲಾರಿ ಬಾಡಿಗೆಯೊಂದಿಗೆ ಟೋಲ್ ಸುಂಕವನ್ನು ಬಾಡಿಗೆ ನೀಡಿದವರೇ ಕೊಡಬೇಕು,ಕ್ಯೂಆರ್ ಕೋಡ್ ಆಧರಿತ ರಿಫ್ಲ್ಕ್ಟರ್ ಟೇಪುಗಳನ್ನು ಅಳವಡಿಸಿಕೊಳ್ಳಬೇಕು ಅನ್ನೋ ನಿಯಮ ತೆಗೆಯಬೇಕು

Related News

spot_img

Revenue Alerts

spot_img

News

spot_img