#Malur Congress# MLA #KY Nanjegowda #house raided # ED
ಬೆಂಗಳೂರು:ಕೋಲಾರ(Kolar) ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ(KY Nanjegowda) ಅವರ ಮನೆಯ ಮೇಲೆ ಬೆಳ್ಳಂ ಬೆಳಗ್ಗೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿನ ಶಾಸಕ ಕೆ.ವೈ. ನಂಜೇಗೌಡ ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದು, ಕೋಚಿಮುಲ್ ಕಚೇರಿಯಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆಸಿದ ಹಿನ್ನೆಲೆ ಈ ದಾಳಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿದ್ದಾರೆ.ಕೋಲಾರ -ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ,ಹತ್ತೂರು ಹೋಬಳಿಯ ಕೋಚಿಮುಲ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ತನಿಖೆ ನಡೆಸಲಾಗಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಹಿನ್ನಲೆ ದಾಳಿ ನಡೆಸಲಾಗಿದೆ. ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.