#Manikshaparade #aug15 #indipendenceday
ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆ.15ರಂದು ನಡೆಯಲಿರುವ 76 ನೇ ಸ್ವಾತಂತ್ರೋತ್ಸವ ಸಮಾರಂಭಕ್ಕಾಗಿ ಸಕಲ ಸಿದ್ಧತೆ ಮಾಡಲಾಗಿದೆ,ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ.ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಆಗಸ್ಟ್ 15ರಂದು ಬೆಳಗ್ಗೆ 8:58ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9:00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು, ನಂತರ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ. ಪಂಥಸಂಚಲನದಲ್ಲಿ ಕೆಎಸ್‌ಆರ್‌ಪಿ, ಸಿಆರ್‌ಪಿಎಫ್ ಬಿಎಸ್ ಎಫ್,ಸಿಎಆರ್, ಕೆಎಸ್‌ಐಎಸ್‌ಎಫ್ ಟ್ರಾಫಿಕ್ ಪೊಲೀಸ್ ಮಹಿಳಾ ಪೊಲೀಸ್ ಹೋಂ ಗಾರ್ಡ್ ಟ್ರಾಪಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕಾಡ್ ಮತ್ತು ಬ್ಯಾಂಡ್ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.