ಬೆಂಗಳೂರು;ಭಾರೀ ಮೊತ್ತದ ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್’ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ.ಮಂತ್ರಿ ಮಾಲ್’ಗೆ ಶಾಕ್ ನೀಡಲು ಮುಂದಾಗಿದ್ದ ಬಿಬಿಎಂಪಿಗೆ ಕೋರ್ಟ್ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ದಾಳಿ ವೇಳೆ ವಶಕ್ಕೆ ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ ನೀಡಿದೆ ಎಂದು ತಿಳಿದುಬಂದಿದೆ.
ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಸಿ.ಯೋಗೇಶ್ ಮಾತನಾಡಿ, ಪಶ್ಚಿಮ ವಲಯದಲ್ಲಿ ನಂಬರ್ ಒನ್ ತೆರಿಗೆ ಸುಸ್ತಿದಾರರೆಂದರೆ ಮಂತ್ರಿ ಮಾಲ್ ಆಗಿದೆ, ಸುಮಾರು 40 ಕೋಟಿ ರೂ. ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.ಚರಾಸ್ತಿ ವಶಕ್ಕೆ ಪಡೆಯದಂತೆ ಮಂತ್ರಿಮಾಲ್ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ನಿಂದ ಫೆಬ್ರವರಿ 2ರಂದೇ ತಡೆಯಾಜ್ಞೆ ತಂದಿದ್ದರು. ಆದರೆ ದಾಳಿ ವೇಳೆ ನ್ಯಾಯಾಲಯದ ತಡೆಯಾಜ್ಞೆ ಪ್ರತಿ ತೋರಿಸಿರಲಿಲ್ಲ, ಇದೀಗ ತಡೆಯಾಜ್ಞೆ ತೋರಿಸಿದ ಹಿನ್ನಲೆ ಚರಾಸ್ತಿ ವಾಪಸ್ ಕಚೇರಿಯಲ್ಲಿ ಇಡಲಾಗುತ್ತಿದೆ.
2018 ರಿಂದ ಇಲ್ಲಿಯವರೆಗೆ ಆಸ್ತಿ ತೆರಿಗೆ ಬಾಕಿ 42.63 ಕೋಟಿ ರೂ.ಗೆ ಏರಿಕೆಯಾಗಿದೆ. ಶನಿವಾರ ಬೆಳಗ್ಗೆ ಅಧಿಕಾರಿಗಳು ತೆರಳಿ ಮಂತ್ರಿ ಮಾಲ್‌ನಿಂದ ಚರ ಆಸ್ತಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು. ಆರಂಭದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಮಾಲ್ ಅಧಿಕಾರಿಗಳು ನಮಗೆ ತಿಳಿಸಲಿಲ್ಲ. ನಂತರ ನ್ಯಾಯಾಲಯದ ಆದೇಶವನ್ನು ತೋರಿಸಿದರು. ನಂತರ ನಾವು ದಾಳಿಯನ್ನು ಕೈಬಿಟ್ಟು, ವಶಕ್ಕೆ ಪಡೆದಿದ್ದ ಚರಾಸ್ತಿಗಳನ್ನು ವಾಪಸ್ ನೀಡಬೇಕಾಯಿತು ಎಂದು ತಿಳಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ಶನಿವಾರ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಮತ್ತು ಮಾರ್ಷಲ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದರು.ಮಂತ್ರಿ ಮಾಲ್‌ನಿಂದ ಚರ ಆಸ್ತಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು.2018 ರಿಂದ ಇಲ್ಲಿಯವರೆಗೆ ಆಸ್ತಿ ತೆರಿಗೆ ಬಾಕಿ 42.63 ಕೋಟಿ ರೂ.ಗೆ ಏರಿಕೆಯಾಗಿದೆ.2020ರ ಆಗಸ್ಟ್ನಲ್ಲಿ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಲಾಗಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು.
ಇಂದು ಬಿಬಿಎಂಪಿ ವಸ್ತುಗಳನ್ನು ಮುಟ್ಟುಗೋಲು ಹಾಕಿರುವುದು ಪ್ರೊಪ್‌ಕೇರ್ ಮಾಲ್ ಮ್ಯಾನೇಜ್ಮೆಂಟ್ಗೆ ಸಂಬಂಧಿಸಿದ್ದಾಗಿದೆ.ಮಂತ್ರಿ ಮಾಲ್ ಮುಖ್ಯ ವ್ಯವಸ್ಥಾಪಕ ಶಬೀರ್ ಮಾತನಾಡಿ, ಆಸ್ತಿ ಉಳಿಸಿಕೊಂಡಿರೋದು ಅಭಿಷೇಕ್ ಡೆವಲಪರ್ಸ್. ಮಂತ್ರಿ ಮಾಲ್ ಬಾಕಿ ಉಳಿಸಿಕೊಂಡಿಲ್ಲ. ಬಿಬಿಎಂಪಿ ದಾಳಿ ಮಾಡ್ತಿರೋದು ಕಾನೂನು ಬಾಹಿರ. ನಾವು ಕೋರ್ಟ್ನಿಂದ ತಡೆಯಾಜ್ಞೆ ಕೂಡಾ ತಂದಿದ್ದೇವೆ. ಏಕಾಏಕಿ ಈ ರೀತಿ ಮಾಡಿರೋದು ಸರಿಯಲ್ಲ. ನಾವು ಕೋರ್ಟಿಗೆ ಹೋಗ್ತೇವೆ ಎಂದಿದ್ದಾರೆ. ಬಿಬಿಎಂಪಿ ಕಾಯ್ದೆಯ ಸೆಕ್ಷನ್ 148(1)ರ ಅಡಿಯಲ್ಲಿ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಯೋಗೇಶ್ ಅವರು ಗುರುವಾರ ಮಾಲ್ ವಿರುದ್ಧ ಅಟ್ಯಾಚ್ ಮೆಂಟ್ ವಾರೆಂಟ್ ಜಾರಿ ಮಾಡಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.2020ರ ಆಗಸ್ಟ್ನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ 10.4 ಕೋಟಿ ರೂಪಾಯಿ ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಆಸ್ತಿ ಮುಟ್ಟುಗೋಲು ಹಾಕಲು ಬಿಬಿಎಂಪಿ ಕಂದಾಯ ವಿಭಾಗ ನಿರ್ಧರಿಸಿತ್ತು.