26.7 C
Bengaluru
Sunday, December 22, 2024

ನ.15 ರ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿ ಕೆ ಶಿವಕುಮಾರ್

#many JDS #MLAs #join #congress #after november #DK shivakumar

ನವದೆಹಲಿ: ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್(Congress) ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್(JDS) ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇನ್ನು ನ.15 ನಂತರ BJP-JDSನಿಂದ ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಡಿಕೆಶಿ ಬಾಂಬ್ ಸಿಡಿಸಿದ್ದಾರೆ.ನಿಗಮ ಮಂಡಳಿ ನೇಮಕ ದಿನಾಂಕ, ಆಪರೇಷನ್ ಹಸ್ತಕ್ಕೂ ಸಂಬಂಧವಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.ರಾಜ್ಯದಲ್ಲಿ ಬಿಜೆಪಿ ಈಗಿರುವ ಪರಿಸ್ಥಿತಿಯಲ್ಲಿ ನಮ್ಮ ಒಬ್ಬ ಶಾಸಕರನ್ನೂ ಅವರಿಗೆ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದು ವ್ಯಂಗ್ಯವಾಡಿದರು.ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡುತ್ತೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದು ಹೇಳಿದರು.

 

 

Related News

spot_img

Revenue Alerts

spot_img

News

spot_img