ಮೈಸೂರು: ಮೈಸೂರು- ಕುಶಾಲನಗರ ಚತುಷ್ಪಥ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದ ಪ್ರತಾಪ ಸಿಂಹ ಸೋಮವಾರ ಅಧಿಕಾರಿಗಳಿಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೆದ್ದಾರಿ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು- ಬೆಂಗಳೂರು ದಶಪಥ ಕಾಮಗಾರಿ ಪೂರ್ಣಗೊಂಡಿದೆ, ಮಾರ್ಚ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಧಾನಿ ಅವರು ಉದ್ಘಾಟಿಸುವರು. ಇದೇ ವೇಳೆ ಮೈಸೂರು- ಕುಶಾಲನಗರ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.ಈ ಸಂಬಂಧ ನಿರಂತರವಾಗಿ ಸಭೆ ನಡೆಸಲಾಗಿದೆ. ಮಾ. 5 ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸುವಂತೆ ಕೋರುವ ಜೊತೆಗೆ ಸೂಚನೆಯನ್ನೂ ನೀಡುತ್ತಿದ್ದೆನೆ ಎಂದು ಸಂಸದರು ತಿಳಿಸಿದರು.ಮೈಸೂರು,ಹುಣಸೂರು, ಪಿರಿಯಾಪಟ್ಟಣ ತಹಶೀಲ್ದಾರ್‌ಗಳು ಹಾಗೂ ಭೂ ದಾಖಲೆಗಳ ಉಪ ನಿರ್ದೆಶಕರು ಹೆದ್ದಾರಿ ಮಾರ್ಗವಾಗಿ ಭೂಮಿಯನ್ನು ಸರ್ವೇ ಮಾಡಿ ಪೋಡಿ ಹಾಗೂ ದುರಸ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸೆಸ್ಕ್ ಅಧಿಕಾರಿಗಳು ರಾಷ್ಟೀಯ ಹೆದ್ದಾರಿಯುದ್ದಕ್ಕೂ ಬರುವ ಉಪ ಕೇಂದ್ರಗಳು ಹಾಗೂ ವಿದ್ಯುತ್ ಗ್ರಿಡ್‌ಗಳನ್ನು ಸ್ಧಳಾಂತರಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮೈಸೂರು ಮತ್ತು ಕುಶಾಲನಗರ ಮಧ್ಯೆ ₹909.86 ಕೋಟಿ ಮೊತ್ತದಲ್ಲಿ ಚತುಷ್ಪಥ ಹೆದ್ದಾರಿ ಅಭಿವೃದ್ಧಿಗೆ ಅನುನೋದನೆ ನೀಡಲಾಗಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರು. ಕುಶಾಲನಗರ ಬೈಪಾಸ್‌ನ ಬಳಿಯ ಗುಡ್ಡೆ ಹೊಸೂರಿನಿಂದ ಈ ಕಾಮಗಾರಿ ನಡೆಸಲಾಗುತ್ತಿದ್ದು, ಇಲವಾಲ-ಕೆ.ಆರ್.ನಗರ ರಸ್ತೆ ಜಂಕ್ಷನ್‌ನ ಯಲಚಹಳ್ಳಿಯಿಂದ ಶ್ರೀರಂಗ ಪಟ್ಟಣದ ಬೈಪಾಸ್ ವರೆಗೆ ಚತುಷ್ಪಥ ಹೆದ್ದಾರಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಯೋಜನೆಗೆ ₹739.39 ಕೋಟಿ ವೆಚ್ಚ ಮಾಡಲಾಗುತ್ತದೆ ಎಂದು ಸಚಿವ ಗಡ್ಕರಿ ತಿಳಿಸಿದ್ದಾರೆ. ಸಚಿವ ಗಡ್ಕರಿ ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಟ್ವೀಟ್ ಮಾಡಿದ ಬೆನ್ನಲ್ಲೇ ಇದೀಗ ಪ್ರಕ್ರಿಯೆ ಚುರುಕು ಪಡೆದಿದೆ.‘92.335 ಕಿ.ಮೀ. ಉದ್ದದ ಈ ಹೆದ್ದಾರಿ ಕಾಮಗಾರಿಯನ್ನು ₹ 3,329 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಯೋಜನೆ ಇದು. 4 ಹಂತಗಳಲ್ಲಿ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ–275ರಲ್ಲಿ 122ನೇ ಕಿ.ಮೀ.ನಿಂದ 214ರವರೆಗೆ ಇರಲಿದೆ. ಭೂಸ್ವಾಧೀನಕ್ಕೆ ₹ 1,113 ಕೋಟಿ ಹಾಗೂ ನಿರ್ಮಾಣಕ್ಕೆ ₹ 2,416 ಕೋಟಿಯಾಗಲಿದೆ’ ಎಂದು ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಅಧಿಕಾರಿಗಳು ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ಯಾವುದಾದರೂ ಸಮಸ್ಯೆಗಳಿದ್ದರೆ ಅದನ್ನು ಮುಕ್ತವಾಗಿ ಹೇಳಿಕೊಳ್ಳಬೇಕು. ಅದನ್ನು ನಾವು ಪರಿಹರಿಸುತ್ತೇವೆ. ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಂ, ಮೈಸೂರು-ಬೆಂಗಳೂರು ಹೆದ್ದಾರಿಯ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್, ಡಿಸಿಎಫ್ ಬಸವರಾಜ್ ,ಭೂಸ್ವಾಧೀನಾಧಿಕಾರಿ ಹರ್ಷವರ್ಧನ್, ಹುಣಸೂರು ತಹಶೀಲ್ದಾರರು ಹಾಗೂ ಭೂ ದಾಖಲೆ ಅಧಿಕಾರಿಗಳು ಪಿರಿಯಾಪಟ್ಟಣ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.