Revenue Facts

ಕೊರೊನಾ’ ಭೀತಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ;ದಿನೇಶ್ ಗುಂಡೂರಾವ್

ಕೊರೊನಾ’ ಭೀತಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ;ದಿನೇಶ್ ಗುಂಡೂರಾವ್

#Mask is mandatory # people above 60 years #due to Corona fear# Dinesh Gundurao

ಮಡಿಕೇರಿ;ಕೊರೊನಾ ಉಪತಳಿ JN.1ರ ಬಗ್ಗೆ ಯಾರು ಆತಂಕ ಪಡಬೇಕಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ತಿಳಿಸಿರುವ ಸಚಿವರು, ಶೀತ, ಕೆಮ್ಮು ಇರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಹೇಳಿದರು. ಕೇಂದ್ರ ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ದಿನೇಶ್ ಹೇಳಿದ್ದಾರೆ,ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದರು.ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು,ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್​​ ಮಾಡಿಸಿಕೊಳ್ಳಬೇಕು.ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ನಿಷೇಧ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ.ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್​​ ಸಿದ್ಧವಾಗಿಡಲಾಗಿದೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ

Exit mobile version