22.4 C
Bengaluru
Saturday, June 15, 2024

ಬಿಎಂಟಿಸಿಯಲ್ಲಿ ಭಾರೀ ಅಕ್ರಮ :6 ಮಂದಿ ವಿರುದ್ಧ ಎಫ್ ಐ ಆರ್

ಬೆಂಗಳೂರು;ಬಿಎಂಟಿಸಿಯಲ್ಲಿ ಭಾರೀ ಗೋಲ್ ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ 79 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ನಡೆಸಿದ್ದು,ಆರೋಪಿಸಿ ಬಿಎಂಟಿಸಿ ಸಹಾಯಕ ಭದ್ರತಾ-ಜಾಗೃತಾಧಿಕಾರಿ ಸಿ.ಕೆ.ರಮ್ಯಾರವರು ದೂರು ದಾಖಲಿಸಿದ್ದಾರೆ.ಈ ಸಂಬಂಧ ಬಿಎಂಟಿಸಿ ಸಹಾಯ ಜಾಗೃತ ಅಧಿಕಾರಿ ರಮ್ಯಾ ಅವರು 6 ಜನರ ಮೇಲೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಎಂಟಿಸಿಯ ಟೆಂಡರ್‌ ಗಳ ನೀಡಿಕೆ, ಫ್ಲ್ಯಾಟ್‌ ಗಳು ಮತ್ತು ವಾಣಿಜ್ಯ ಮಳಿಗೆಗಳ ಹಂಚಿಕೆ, ಟೆಂಡರ್‌ ಅವಧಿ ವಿಸ್ತರಣೆಗೆ ಸಂಬಂಧಪಟ್ಟ ಕಡತಗಳಿಗೆ ಬಿಎಂಟಿಸಿ ಎಂಡಿ, ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ರೇಜು, ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಕೆ ಅರುಣ ಸಹಿ ನಕಲು ಮಾಡಲಾಗಿದೆ.ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಾರ ಅಧಿಕಾರಿ ಶ್ಯಾಮಲಾ ಎಸ್ ಮುದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತ, ಸಹಾಯಕ ಸಂಚಾರ ಅಧೀಕ್ಷಕಿ ಟಿ ಅನಿತಾ, ಸಂಚಾರ ನೀರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಾಗಿದೆ.ಕಳೆದ ಮೂರು ವರ್ಷಗಳಿಂದ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಸ್ವಚ್ಛತಾ ನಿರ್ವಹವಣಾ ಗುತ್ತಿಗೆ ಸೇರಿ 4 ಟೆಂಡರ್​​ಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅವ್ಯವಹಾರ ನಡೆಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಅಧಿಕಾರಿಗಳ ಸಹಿ ನಕಲು ಮಾಡಿ ಬಿಎಂಟಿಸಿ ನಿಗಮಕ್ಕೆ 76.57 ಲಕ್ಷ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ

Related News

spot_img

Revenue Alerts

spot_img

News

spot_img