21.4 C
Bengaluru
Saturday, July 27, 2024

ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ,ನಾಲ್ವರು ಅರೆಸ್ಟ್‌

#Massive security #lapse # Lok Sabha #four arrested

ನವದೆಹಲಿ: ಹೊಸ ಸಂಸತ್‌ ಭವನದಲ್ಲಿ(Parliament House) ಭಾರೀ ಭದ್ರತಾ ಲೋಪವಾಗಿರುವ(Security breach) ಬಗ್ಗೆ ವರದಿಯಾಗಿದೆ. ಸದಸ್ಯ ನಡೆಯುತ್ತಿರುವಾಗಲೇ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಪರಿಚಿತ ವ್ಯಕ್ತಿಗಳು ದಿಢೀರ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿದ್ದಾರೆ. ಈ ವೇಳೆ ಗಾಬರಿಯಿಂದ ಸಂಸದರು ಓಡಿ ಹೋಗಿದ್ದಾರೆ.ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ಜಿಗಿದರೆ ಮತ್ತೊಬ್ಬ ಲೋಕಸಭೆಯ(Lok Sabha) ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.ಕೂಡಲೇ ಇಬ್ಬರು ವ್ಯಕ್ತಿಗಳ ಮೇಲೆ ಅಲ್ಲಿದ್ದ ಲೋಕಸಭಾ ಸದಸ್ಯರು ನಿಯಂತ್ರಿಸಲು ಹೋಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು.ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಲೋಕಸಭೆಯ ಒಳಗೆ ಸಂಸದರ ಸ್ಥಾನಕ್ಕೆ ದಿಡೀ‌ರ್ ಆಗಿ ನುಗ್ಗಿಬಂದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಈ ಯುವಕರು ನಕಲಿ ಪಾಸ್‌ಗಳನ್ನು ಮಾಡಿಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಸಾಗ‌ರ್ ಅನ್ನುವ ವ್ಯಕ್ತಿ ಪಾಸ್‌ ಮಾಡಿಸಿಕೊಂಡಿದ್ದರೆ, ಮತ್ತೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಇಬ್ಬರು ಅಪರಿಚಿತರು ತಮ್ಮ ಶೂ ಒಳಗೆ ಹಳದಿ ಬಣ್ಣದ ಗ್ಯಾಸ್‌ ರೀತಿಯ ವಸ್ತುಗಳನ್ನು ಇಟ್ಟುಕೊಂಡಿದ್ದು ಅದನ್ನು ಸ್ಫೋಟಿಸಿದ್ದಾರೆ ಎಂದು ವರದಿಯಾಗಿದೆ.ಹಳದಿ ಬಣ್ಣದ ಹೊಗೆಯನ್ನು ಹೊರಸೂಸುವ ಕ್ಯಾನ್‌ ಗಳನ್ನು ಹೊತ್ತು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಓರ್ವ ಯುವಕ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ನೀಲಂ (42) ಮತ್ತು ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದ್ದು, ಇಬ್ಬರನ್ನು ಸಾರಿಗೆ ಭವನದ ಮುಂಭಾಗದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ.ಲೋಕಸಭೆ ಕಲಾಪ ಮತ್ತೆ ಆರಂಭವಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಭದ್ರತಾ ಲೋಪದ ಬಗ್ಗೆ ಗದ್ದಲ ಎಬ್ಬಿಸಿದರು. ಈ ಕುರಿತು ಸ್ಪೀಕ‌ರ್ ಓಂ ಬಿರ್ಲಾ ಅವರು, ‘ಘಟನೆಯ ಪ್ರಾಥಮಿಕ ತನಿಖೆಯಿಂದ ಇಬ್ಬರೂ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಡುಗಡೆಯಾದ ಹೊಗೆ ಸಾಮಾನ್ಯವಾಗಿದೆ. ಘಟನೆಯ ತನಿಖೆ ಮುಂದುವರಿದಿದೆ’ ಎಂದು ಸಂಸದರಿಗೆ ತಿಳಿಸಿದರು.

Related News

spot_img

Revenue Alerts

spot_img

News

spot_img