ಬೆಂಗಳೂರು: ಕಳೆದ ಕೆಲ ದಿನಗಳಿಂದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಜಧಾನಿಯ ವಿವಿಧೆಡೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿತ್ತು. ಇಂತಹ ಹಣದ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿ ಇಂದು ರಾಜ್ಯಾಧ್ಯಂತ ಬಿಜೆಪಿಯಿಂದ ಧರಣಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.ಈ ಕುರಿತಂತೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ಕೂಡ ನಡೆಸಲಾಗಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ BJP ಇಂದು & ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. CM – ಮತ್ತು DCM ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಇಂದು ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ನಾಳೆ ಮಂಡಲಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ತಿಳಿಸಿದ್ದಾರೆ. ರಾಜ್ಯದ ಜನರ ಹಣವನ್ನು ಲೂಟಿ ಮಾಡಿ ಪಂಚ ರಾಜ್ಯ ಚುನಾವಣೆಗೆ ಕಳುಹಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.’ರಾಜ್ಯದಲ್ಲಿ ಲೂಟಿ ಸರ್ಕಾರ ಅಸ್ತಿತ್ವದಲ್ಲಿದೆ. ಅಧಿಕಾರಕ್ಕೆ ಬಂದ ಬಳಿಕ ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ದಸರಾ ವೇಳೆ ಕಲಾವಿದರಿಂದಲೂ ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.ರಾಜ್ಯಾದ್ಯಂತ ಎಲ್ಲ ಜಿಲ್ಲೆ, ಮಂಡಲಮಟ್ಟದಲ್ಲಿ ಸೋಮವಾರ ಚಳವಳಿ ನಡೆಸಿ, ಕಾಂಗ್ರೆಸ್ ಸರ್ಕಾರದ ವರ್ಗಾವಣೆ ಮತ್ತು ಕಮಿಷನ್ ದಂಧೆಯತ್ತ ಜನರ ಗಮನಸೆಳೆಯಲು ಮುಂದಾಗಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್ ಹೋರಾಟ ನಡೆಸಲಿದೆ.ಐಟಿ ದಾಳಿಯಾದಾಗ ಗುತ್ತಿಗೆದಾರ, ಬಿಲ್ಡರ್‌ಗಳ ಮನೆಯಲ್ಲಿ 40 ರಿಂದ 50 ಕೋಟಿ ರೂ. ಸಿಗುತ್ತದೆ. 600 ಕೋಟಿ ರೂ. ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ ಎರಡೇ ದಿನಗಳಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ. ಪತ್ತೆಯಾಗಿದ್ದು, ಇದಕ್ಕೂ ಕಾಂಗ್ರೆಸ್ಸಿಗೂ ಸಂಬಂಧವಿದೆ ಎಂದು ಆರೋಪಿಸಿದರು.