ಬೆಂಗಳೂರು, ಜ. 25: ವಿಧಾನಸಭೆ ಚುನಾವಣೆ ಸಮಯದಲ್ಲಿ ಮಂಡ್ಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ. ಗೋಪಾಲಯ್ಯ ಅವರ ಬದಲಿಗೆ ಹೊಸ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಈ ಮುಂಚೆ ಸಚಿವ ಆರ್. ಅಶೋಕ್ ಗೆ ಯಾವುದೇ ಜಿಲ್ಲೆಯ ಉಸ್ತುವಾರಿಯ ಹೊಣೆ ನೀಡಿರಲಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರವಾಗಿದ್ದು,ಒಕ್ಕಲಿಗ ಸಮಮುದಾಯದ ಪ್ರಮುಖ ನಾಯಕ ಆರ್.ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಹಾಸನ ಜಿಲ್ಲಾ ಉಸ್ತುವಾರಿ ಜೊತೆಗೆ ಮಂಡ್ಯ ಜಿಲ್ಲೆಯನ್ನು ಸಹ ಹೆಚ್ಚುವರಿಯಾಗಿ ಅಬಕಾರಿ ಸಚಿವ ಗೋಪಾಲಯ್ಯ ಅವರಿಗೆ ನೀಡಲಾಗಿತ್ತು. ಅಶೋಕ್ ಬೆಂಗಳೂರು ನಗರ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದರು. ಆದ್ರೆ, ಇದೀಗ ಅವರಿಗೆ ಬೆಂಗಳೂರು ಬದಲಿಗೆ ಮಂಡ್ಯ ನೀಡಲಾಗಿದೆ.ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿದ್ದಾರೆ.