ನವದೆಹಲಿ : ಫ್ರಾನ್ಸ್ನ ಅತ್ಯುನ್ನತ ಪ್ರಶಸ್ತಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ಮೋದಿಯವರಿಗೆ ‘ಗ್ರಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಎಲಿಸೀ ಅರಮನೆಯಲ್ಲಿ ನಡೆದ ಔತಣಕೂಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಗೌರವಕ್ಕಾಗಿ ಭಾರತದ ಜನತೆಯ ಪರವಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಫ್ರಾನ್ಸ್‌ನ ಅತ್ಯುತ್ತಮ ಗೌರವ ಪ್ರಶಸ್ತಿಯಾಗಿದೆ.ಪ್ರಧಾನಿ ಮೋದಿಯವರಿಗಿಂತ ಮೊದಲು, ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ ವೇಲ್ಸ್ ರಾಜಕುಮಾರ ಕಿಂಗ್ ಚಾರ್ಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ಆಗಿನ ಪ್ರಿನ್ಸ್ ಆಫ್ ವೇಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಇತರ ನಾಯಕರು ಈ ಪ್ರಶಸ್ತಿಗೆ ಪಾತ್ರರಾಗಿದ್ದರು.