Revenue Facts

‘ಗೃಹಲಕ್ಷ್ಮೀ’ಯರ ಖಾತೆಗೆ ಬಂದಿಲ್ವಾ ಕಾಸು, ನಿಮಗಾಗಿ ಇಲ್ಲೊಂದು ಗುಡ್‌ನ್ಯೂಸ್‌!

‘ಗೃಹಲಕ್ಷ್ಮೀ’ಯರ ಖಾತೆಗೆ ಬಂದಿಲ್ವಾ ಕಾಸು, ನಿಮಗಾಗಿ ಇಲ್ಲೊಂದು ಗುಡ್‌ನ್ಯೂಸ್‌!

ಬೆಂಗಳೂರು;ಕಾಂಗ್ರೆಸ್(C0ngress) ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.ಗೃಹಲಕ್ಷ್ಮೀ’ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿಸಿದ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗಳ ಸಮಸ್ಸೆಗಳ ನಿವಾರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರ ನಡೆಸಲು ಸುತ್ತೋಲೆಯನ್ನು ಹೊರಡಿಸಿದೆ.ಪಿಡಿಒಗಳ(PDO) ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ,ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಏಕ ಕಾಲಕ್ಕೆ ಶಿಬಿರ ನಡೆಸಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ.ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ,ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ(post payment bank) ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು ಎಂದು ಆದೇಶವನ್ನು ಹೊರಡಿಸಲಾಗಿದೆ,ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಡಿಸೆಂಬರ್ 27 ರಿಂದ 29 ರವರೆಗೆ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್‌ಗಳನ್ನು ಯೋಜನೆ ಮಾಡಲು ಸೂಚಿಸಲಾಗಿದೆ,

Exit mobile version