Revenue Facts

9.44ಲಕ್ಷ ಅರ್ಹರಿಗೆ ಹಣ ಜಮೆ‌ಯಾಗಿಲ್ಲ;ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ, ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ 9,44,155 ಅರ್ಜಿದಾರರಿಗೆ ಹಣ ಸಂದಾಯವಾಗಿಲ್ಲ. ಇದಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಕೆಲವೆಡೆ ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಯೋಜನೆಗೆ ಚಾಲನೆ ನೀಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೆ ತಡ ಗೃಹಲಕ್ಷ್ಮೀ ಯೋಜನೆಗೆ 1.08 ಕೋಟಿ ಅರ್ಜಿ ಬಂದಿತ್ತು. ಯೋಜನೆಗೆ 1.08 ಕೋಟಿ ಅರ್ಜಿ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5. 5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ.ಈ ಗಂಭೀರ ಚರ್ಚೆಯ ಬೆನ್ನಲ್ಲೆ ಗೊಂದಲದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ, 9‌.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆ‌ಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಪನೆ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ.9‌.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗದೇ ಇರುವುದಕ್ಕೂ ಕಾರಣ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, 3082 ಅರ್ಜಿದಾರರು ಮರಣ ಹೊಂದಿದ್ದು ಅವುಗಳನ್ನು ಅನರ್ಹಗೊಳಿಸಲಾಗಿದೆ. 1ಲಕ್ಷದ 59ಸಾವಿರದ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5ಲಕ್ಷದ 96ಸಾವಿರದ 268ಅರ್ಜಿದಾರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ 683 ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಕಂಡು ಬಂದಿದೆ. 9766 ಅರ್ಜಿ ಸೇವಾಸಿಂದು ವತಿಯಿಂದ ಪುನರ್ ಪರೀಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Exit mobile version