21.4 C
Bengaluru
Saturday, July 27, 2024

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭ

ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದ ಪರಿಸ್ಥಿತಿ ಮತ್ತು ದೆಹಲಿ ನಾಗರಿಕ ಸೇವಾ ಸಿಬ್ಬಂದಿಯ ಸುಗ್ರೀವಾಜ್ಞೆ ಸೇರಿದಂತೆ ಹಲವು ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.ಇದಲ್ಲದೆ ಹೊಸದಾಗಿ ವಿಪಕ್ಷಗಳು ಮೈತ್ರಿ ಘೋಷಿಸಿಕೊಂಡ ಬಳಿಕ ಈ ಅಧಿವೇಶನ ಭಾರೀ ಕುತೂಹಲ ಮೂಡಿಸಿವೆ. ದೆಹಲಿಯ ಆಡಳಿತಾತ್ಮಕ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನೂ ಉಲ್ಲಂಘಿಸಿ ಸುಗ್ರೀವಾಜ್ಞೆ ಹೊರಡಿಸಿದ್ದ ಕೇಂದ್ರ ಸರ್ಕಾರ ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ದೆಹಲಿ ಅಧಿಕಾರಶಾಹಿಗಳ ಮೇಲಿನ ಮಸೂದೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂಗಾರು ಅಧಿವೇಶದಲ್ಲಿ ಭಾರಿ ಮುಖಾಮುಖಿಯಾಗುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷದಲ್ಲಿ 105 ಸದಸ್ಯರು ಮಸೂದೆಯನ್ನು ವಿರೋಧಿಸಿದ್ದಾರೆ.ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಒಟ್ಟು 17 ದಿನ ಕಲಾಪಗಳು ನಡೆಯಲಿವೆ. ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಕಟ್ಟಡಕ್ಕೆ ಮಧ್ಯಭಾಗದಲ್ಲಿ ವರ್ಗಾವಣೆಯಾಗಲಿದ್ದಾರೆ.

Related News

spot_img

Revenue Alerts

spot_img

News

spot_img