#More than 800 crore #drought relief funds #deposited #CM Siddaramaiah
ಬೆಂಗಳೂರು ನ21;ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ-ಬರ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ₹800 ಕೋಟಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಮೀನ-ಮೇಷ ಎಣಿಸುತ್ತಿದೆ. ಬರ ಪರಿಸ್ಥಿತಿ ಸಂದರ್ಭದಲ್ಲಿ 150 ದಿನ ಕೆಲಸ ನೀಡಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದ ರೈತರು ಬರದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯ ಸರ್ಕಾರದಿಂದ ಯಾವುದೇ ರೀತಿಯಾದಂತಹ ಬರ ಪರಿಹಾರ ರೈತರಿಗೆ ತಲುಪಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು ಇದಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ್ದು, ಬರ ಪರಿಹಾರ ರೈತರಿಗೆ ತಲುಪಿಲ್ಲ ಎಂದು ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿಗೂ ಹೆಚ್ಚು ಬರ ಪರಿಹಾರದ ಹಣ ಬಿಡುಗಡೆ ಆಗಿದೆ. ಕೇಂದ್ರ ಸರ್ಕಾರದ ಬಳಿಯೂ ಬರ ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ. ಕೇಂದ್ರದಿಂದ ಈವರೆಗೂ ಯಾವುದೇ ರೀತಿಯಾದ ಅನುದಾನ ಬಂದಿಲ್ಲ ಎಂದು ತಿಳಿಸಿದರು.