ಬೆಂಗಳೂರು;ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಮುಹೂರ್ತ ನಿಗದಿಯಾಗಿದೆ. ನ. 15ರ ಬೆಳಗ್ಗೆ 10 ಗಂಟೆಗೆ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ನಡೆಯಲಿದ್ದು, ಇದಾದ ಮರುದಿನವೇ ನ. 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಪ್ಲಾನ್ ಮಾಡಿದ್ದಾರೆ. ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದ್ದು, ಇದನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ(JP nadda) ಜತೆ ಚರ್ಚಿಸಿ ಫೈನಲ್ ಮಾಡಲಿದ್ದಾರೆ.ನ.16ರಂದು ಬೆಂಗಳೂರಿನ ಅರಮನೆ ಮೈದಾನ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು. ಶುಕ್ರವಾರದೊಳಗೆ ಶಾಸಕರ ಸಭೆ ಕರೆಯಲಾಗುವುದು. ಸಭೆಯಲ್ಲಿ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ ಎಂದೂ ಹೇಳಿದ್ದಾರೆ.ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದ್ದು, ಇದನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜತೆ ಚರ್ಚಿಸಿ ಫೈನಲ್ ಮಾಡಲಿದ್ದಾರೆ.