22.9 C
Bengaluru
Saturday, July 6, 2024

ರಾಜ್ಯದ 4 ವಿಮಾನ ನಿಲ್ದಾಣಗಳ ಹೆಸರು ಬದಲಾವಣೆ

#Name change # 4 airports # the state

ಬೆಂಗಳೂರು;ರಾಜ್ಯದ 4 ನೂತನ ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರಿಡುವ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿತು.ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲು ತೀರ್ಮಾನಿಸಲಾಗಿದೆ.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು & ವಿಜಯಪುರದ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ. ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.ಈ ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.ಈ ಪ್ರಸ್ತಾವನೆಯನ್ನು ಯಡಿಯೂರಪ್ಪ ಅವರು ನಿರಾಕರಿಸಿದ್ದು, ರಾಷ್ಟ್ರಕವಿ ಕುವೆಂಪು ಹೆಸರನ್ನಿಡುವಂತೆ ಸೂಚಿಸಿದ್ದರು. ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್‌. ಅಶೋಕ್‌, ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನ ಎಚ್.ಎನ್. ಕೋನರೆಡ್ಡಿ, ಅಬ್ಬಯ್ಯ ಪ್ರಸಾದ್‌, ರಾಜ್ಯ ಸರಕಾರದ ತೀರ್ಮಾನವನ್ನು ಸ್ವಾಗತಿಸಿ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ಹೆಸರಿಡಬೇಕೆಂಬ ಒತ್ತಾಯ ಇರುವ ಕಾರಣ ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದು ಉತ್ತಮ ಎಂದು ಸಲಹೆ ಮಾಡಿದರು. ಇನ್ನೂ ಹೆಸರಿಡದ ಹಲವು ವಿಮಾನ ನಿಲ್ದಾಣಗಳಿವೆ. ಅವುಗಳ ಬಗ್ಗೆ ಮುಂಬರುವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಎಂ.ಬಿ.ಪಾಟೀಲ ತಿಳಿಸಿದರು.

Related News

spot_img

Revenue Alerts

spot_img

News

spot_img