21.1 C
Bengaluru
Monday, December 23, 2024

National Education Policy;ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು: ಸಿದ್ದರಾಮಯ್ಯ

#NEP #KPCC #NEP #Siddramayya

ಬೆಂಗಳೂರು;ಮುಂಬರುವ ಶೈಕ್ಷಣಿಕ ವರ್ಷದಿಂದ ಎನ್‌ಇಪಿ(NEP) ರದ್ದುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿKPCC) ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಎನ್‌ಇಪಿ(NEP) ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದಾಗಲಿದೆ ಎಂದರು. ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಿದ ನಂತರ NEP ಅನ್ನು ರದ್ದುಗೊಳಿಸಬೇಕು. ಈ ವರ್ಷ ಅದಕ್ಕೆ ಸಮಯವಿರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆಯಾಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆಯಾಗಬಾರದು ಎಂದು ಈ ವರ್ಷ ಮುಂದುವರಿಸಿದ್ದಾರೆ.NEP ಅನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಮತ್ತು ಶಿಕ್ಷಕರು ಏಕಕಾಲದಲ್ಲಿ ವಿರೋಧಿಸುತ್ತಾರೆ. ದೇಶದಲ್ಲಿ ಎಲ್ಲ ಎನ್‌ಇಪಿ ಜಾರಿಗೊಳಿಸದೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಎನ್‌ಇಪಿ ಜಾರಿಗೊಳಿಸುವ ಮೂಲಕ ಬಿಜೆಪಿ ದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.

Related News

spot_img

Revenue Alerts

spot_img

News

spot_img