27.4 C
Bengaluru
Monday, February 17, 2025

ಅಕ್ಟೋಬರ್10 ರಂದು ರಾಷ್ಟ್ರೀಯ ಹೆದ್ದಾರಿಗಳು ಬಂದ್

ಬೆಂಗಳೂರು;ರಾಜ್ಯದಲ್ಲಿ ಕಾವೇರಿಯ ಕಿಚ್ಚು ಹೆಚ್ಚುತ್ತಲೇ ಇದೆ. ಈಗಾಗಲೇ ರಾಜ್ಯದಲ್ಲಿ ಎರಡು ಬಂದ್ ಗಳು ಸಹ ಆಗಿವೆಅ.10ರಂದು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಹಾಗೂ ಬೆಂಗಳೂರಿನಲ್ಲಿ ಅತ್ತಿಬೆಲೆ ಬಳಿ ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಾರದು. ತಮಿಳುನಾಡಿನವರು ಯಾವುದೋ ದೇಶದ ಮೇಲೆ ಯುದ್ಧ ಮಾಡಿದಂತೆ ಆಡುತ್ತಾರೆ ಎಂದು ಕಿಡಿಕಾರಿದರು.ನಾವು ತಮಿಳುನಾಡಿನ ತಪ್ಪು ನಿರ್ಧಾರ, ಬ್ಲಾಕ್​ಮೇಲ್ ಖಂಡಿಸಿ ಸ್ಟಾಲಿನ್ ಸರ್ಕಾರದ ವಿರುದ್ಧ ಐದನೇ ತಾರೀಖಿನಂದು ಬೆಂಗಳೂರಿನಿಂದ ಕೆಆರ್‌ ಎಸ್‌ ವರೆಗೆ ಬಾರಿ ದೊಡ್ಡ ಮೆರವಣಿಗೆ ಮಾಡುತ್ತೇವೆ. ನಮ್ಮಲ್ಲಿ ನೀರಿಲ್ಲ ಅಂತ ಸ್ಪಷ್ಟವಾಗಿ ಹೇಳುತ್ತೇನೆ. ಕೆಆರ್‌ಎಸ್​ನಲ್ಲಿ ಕನ್ನಡ ಒಕ್ಕೂಟದ ಮೇಳ ಮಾಡುತ್ತೇವೆ. ನೂರಾರು ವಾಹನಗಳಲ್ಲಿ ತೆರಳಿ ಕನ್ನಡ ಒಕ್ಕೂಟ, ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ ಮಾಡಿ ಕರಾಳ ದಿನ ಆಚರಿಸುತ್ತಿದ್ದೇವೆ ಎಂದರು.

Related News

spot_img

Revenue Alerts

spot_img

News

spot_img