#National Investigation #Agency# NIA filed #charge sheet #against accused
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ(Vandalism) ಮತ್ತು ಆತ್ಮಾಹುತಿ ದಾಳಿ(Suicide attack) ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ 8 ಶಂಕಿತ ಉಗ್ರರ ವಿರುದ್ಧ ಕೋರ್ಟ್ ಗೆ ರಾಷ್ಟ್ರೀಯ ತನಿಖಾದಳ(National Investigation Agency) ಚಾರ್ಜ್ ಶೀಟ್(Charge sheet) ಸಲ್ಲಿಸಿದೆ.8 ಮಂದಿಯಲ್ಲಿ 6 ಮಂದಿಯನ್ನ ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.ನಾಸೀರ್, ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಸೇರಿ 8 ಶಂಕಿತ ಉಗ್ರರ(Suspected terrorists) ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಬೆಂಗಳೂರಿನಲ್ಲಿ ಸ್ಫೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಅನುಮಾನದ ಮೇಲೆ ಕಳೆದ ವರ್ಷ ಜು.18ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.19ರಂದು ದಾಳಿ ನಡೆಸಿದ ಪೊಲೀಸರು ಐವರು ಲಷ್ಕರ್ ಉಗ್ರರನ್ನು ಬಂಧಿಸಿದ್ದರು. ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.