21.4 C
Bengaluru
Saturday, July 27, 2024

“ಸಂಧಾನ ಸಫಲ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ:

ಬೆಂಗಳೂರು: ಮೇ :18:
  ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೊನೆಗೆ ಮುಕ್ತಯಗೊಂಡಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶ್ರೀ ಸಿದ್ದರಾಮ್ಯ್ ರವರನ್ನು ಆಯ್ಕೆಮಾಡಲಾಗಿದೆ. ಮುಖ್ಯಮಂತ್ರಿ ರೇಸ್ ನಲ್ಲಿದ್ದ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆಯೊಂದೇ ಬಾಕಿಯಿತ್ತು. ರಾಜ್ಯದ 24ನೇ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೂತನ ಮುಖ್ಯಮಂತ್ರಿ ಯಾರು ಎಂಬಗೊಂದಲ ಶುರುವಾಗಿ ಕಳೆದ ಭಾನುವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಕಾರಣ, ಸಿಎಂ ಆಯ್ಕೆ ಹೈಕಮಾಂಡ್ ಮುಂದೆ ದೆಹಲಿಗೆ ಶಿಫ್ಟ್ ಆಗಿತ್ತು. ಸೋಮವಾರವೇ ಸಿದ್ದರಾಮಯ್ಯ ರವರು ತಮ್ಮ ಬೆಂಬಲಿತ ಶಾಸಕರೊಡನೆ  ದೆಹಲಿಗೆ ತೆರಳಿ ತಮ್ಮ ರಾಜಕೀಯ ದಾಳಗಳನ್ನು ಉರುಳಿಸಿದ್ದರು. ಮತ್ತೊಂದೆಡೆ ಸೋಮವಾರ ಅನಾರೋಗ್ಯದ ಕಾರಣ ಹೇಳಿ ತಾಣು ಡೆಹಲಿಗೆ ಹಪಗುವುದುದಿಲ್ಲ ವೆಂದು ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಡಿಕೆ ಶಿವಕುಮಾರ್ ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳಿ ಸಿಎಂ ಕುರ್ಚಿಗಾಗಿ ಕಸರತ್ತು ನಡೆಸಿದ್ದರು.
ಶಾಸಕರ ಅಭಿಪ್ರಾಯದಂತೆ ಸಿಎಂ ಆಯ್ಕೆ ಮಾಡುವುದಕ್ಕೆ ಡಿಕೆಶಿ ವಿರೋಧಿಸಿದ್ದು, ಕಾಂಗ್ರೇಸ್ ನ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರನ್ನು ಸಿಎಂ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಇದರಿಂದ ಸಿಎಂ ಆಯ್ಕೆ ಎಂಬುದು ಹೈಕಮಾಂಡ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿತ್ತು.
ಬುಧವಾರ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೆವಾಲಾ, ವೇಣುಗೋಪಾಲ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸುದೀರ್ಘ ಚರ್ಚೆ ಮಾಡಿದ್ದರು.  ಬುಧವಾರ ಸಂಜೆ ಡಿಕೆಶಿ ಮತ್ತು ಸಿದ್ದರಾಮಯ್ಯ ಜೊತೆ ಮಲ್ಲಿಕಾರ್ಜುನ ಖರ್ಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದರು.
ಇಬ್ಬರ ಜೊತೆ ಚರ್ಚೆ ಮಾಡಿದ ಬಳಿಕ ರಾಹುಲ್ ಗಾಂಧಿ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಖರ್ಗೆ ತೀರ್ಮಾನಿಸಿದ್ದರು. ಈ ಸಿಎಂ ಜಂಗಿ ಕುಸ್ತಿ ವಿಪಕ್ಷಗಳಿಗೆ ಟೀಕಾ ವಿಚಾರ ಆಗುವುದು ಎನ್ನುವದನ್ನು ಅರಿತ ನಾಯಕರು, ಬೇಗನೆ ಸಿಎಂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ಇಂದು ಸಿಎಂ ಹೆಸರು ಘೋಷಿಸಲಾಗಿದೆ. ರಾಹುಲ್ ಗಾಂಧಿ ಜೊತೆ ಚರ್ಚೆ ಮಾಡಿದ ಬಳಿಕ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗಿದೆ.
ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಪ್ರಮಾಣವಚನ:
ಮೇ 20ರ ಮಧ್ಯಾಹ್ನ 2.30 ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಏಳು ಗಂಟೆಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಪ್ರಮುಖ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

Related News

spot_img

Revenue Alerts

spot_img

News

spot_img