Revenue Facts

NIA Raid: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಏಕಕಾಲಕ್ಕೆ NIA ದಾಳಿ

NIA Raid: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಏಕಕಾಲಕ್ಕೆ NIA ದಾಳಿ

#NIA #Raids #Simultaneous #10 states #including #karnataka

ಬೆಂಗಳೂರು;ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ NIA(National Investigative agency) ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ ನಡೆಸಿದೆ.ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ(NIA) ಇಂದು ದಾಳಿ ನಡೆಸಿದೆ.ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15 ಕಡೆ NIA ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಮಾನವ ಕಳ್ಳ ಸಾಗಣೆ (Human trafficking)ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ NIA ಈ ದಾಳಿ ನಡೆಸಿದೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ಭಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 15 ಅಧಿಕರಿಗಳ ತಂಡದಿಂದ ಈ ದಾಳಿ ನಡೆಸಲಾಗಿದೆ.

Exit mobile version