22.1 C
Bengaluru
Friday, July 19, 2024

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿ ಅಂಜಾರಿಯಾ ನೇಮಕ

#Nilay V Anjaria #appointed # Chief Justice

ಬೆಂಗಳೂರು;ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ(judge) ಎನ್.ವಿ. ಅಂಜಾರಿಯಾ ಅವರು ನೇಮಕವಾಗಿದ್ದಾರೆ.ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿಲಯ್ ವಿ ಅಂಜಾರಿಯಾ(Nilay v Anjaria) ಅವರನ್ನು ಕರ್ನಾಟಕ ಹೈಕೋರ್ಟ್(Highcourt) ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.2011ರ ನವೆಂಬರ್ 21ರಂದು ನ್ಯಾ. ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿತ್ತು.ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.ಫೆಬ್ರವರಿ 24ರ ಬಳಿಕ ಎನ್.ವಿ ಅಂಜಾರಿಯಾ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ

Related News

spot_img

Revenue Alerts

spot_img

News

spot_img