ಸತತ ಮೂರನೇ ಬಾರಿಗೆ ಕಾಗದ ರಹೀತ ಡಿಜಿಟಲ್ ಬಜೆಟ್ ಅನ್ನು ಮಂಡನೇ ಮಾಡುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಕ್ಕಳು ಮತ್ತು ಹದಿಹರೆಯದವರಿಗೆ ಎಲ್ಲಾ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಅನುಕೂಲವಂತೆ ಗುಣಮಟ್ಟದ ಪುಸ್ತಕಗಳಿಗೆ ಒತ್ತು ನೀಡಿ ಹೊಸ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಈ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲು ಮತ್ತು ನ್ಯಾಷನಲ್ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ಸಂಪನ್ಮೂಲಗಳನ್ನು ಪಡೆದುಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಮೂಲಸೌಕರ್ಯವನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಲಾಗುವುದು ಹಾಗೂ ಈ ಗ್ರಂಥಾಲಯಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಶೀರ್ಷಿಕೆಗಳನ್ನು ಮರುಹೊಂದಿಸಲು NBT, CBT ಅನ್ನು ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಿದೆ.