22.3 C
Bengaluru
Thursday, June 20, 2024

ನ.1 ಕರ್ನಾಟಕ ರಾಜ್ಯೋತ್ಸವ ದಿನದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:ಮೈಸೂರು ರಾಜ್ಯವು ಕರ್ನಾಟಕ(karnataka) ಎಂದು ಮರುನಾಮಕರಣಗೊಂಡು ನ.1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಕರ್ನಾಟಕ ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಸಂಭ್ರಮ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಹಿನ್ನೆಲೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ನ.1ರಂದು ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಂತರ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವದ ವೇಳೆ 5 ಕನ್ನಡ ಗೀತೆಗಳನ್ನು ಹಾಕುವುದು ಕಡ್ಡಾಯವಾಗಿದೆ. 5 ಕನ್ನಡ ಹಾಡುಗಳು


1 ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಹುಯಿಳಗೋಳ ನಾರಾಯಣ ರಾಯರು,
2 ಎಲ್ಲಾದರೂ ಇರು ಎಂತಾದರು ಇರು – ಕುವೆಂಪು,
3 ಒಂದೇ ಒಂದೇ ಕರ್ನಾಟಕ ಒಂದೇ – ದ.ರಾ. ಬೇಂದ್ರೆ
4 ಹೊತ್ತಿತೋ ಹೊತ್ತಿತು ಕನ್ನಡ ದೀಪ – ಸಿದ್ದಯ್ಯ ಪುರಾಣಿಕ 5 ಹೆಸರಾಯಿತು ಕರ್ನಾಟಕ – ಚನ್ನವೀರ ಕಣವಿ
5 ಕರ್ನಾಟಕ- ಉಸಿರಾಗಲಿ ಕನ್ನಡ (ಚನ್ನವೀರ ಕಣವಿ) ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶದಲ್ಲಿ ಹೇಳಿದೆ.

Related News

spot_img

Revenue Alerts

spot_img

News

spot_img