ಬೆಂಗಳೂರು;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ.10 ಬೃಹತ್ ಹಗರಣಗಳ ಬಗ್ಗೆ ಎನ್. ಆರ್.ರಮೇಶ್ ಲೋಕಾಯುಕ್ತಕ್ಕೆ ದೂರ ನೀಡಿದ್ದಾರೆ.ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್, ಎಂ. ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಎನ್. ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ಅವರುಗಳ ವಿರುದ್ಧ 10 ದೂರುಗಳನ್ನು ದಾಖಲಿಸಲಾಗಿದೆ.9 ಮಂದಿ ಹಿರಿಯ ಐಎಎಸ್ ಅಧಿಕಾರಿಗಳು, 5 ಮಂದಿ ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಅಧಿಕಾರಿಗಳ ವಿರುದ್ಧ 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ 10 ದೂರುಗಳು ಸಲ್ಲಿಕೆಯಾಗಿದೆ.
ಅಲ್ಲದೇ 62 ಗಂಟೆಗಳ ಅವಧಿಯ ವೀಡಿಯೋ ತುಣುಕುಗಳು ಮತ್ತು 900ಕ್ಕೂ ಹೆಚ್ಚು ಛಾಯಾಚಿತ್ರಗಳನ್ನೊಳಗೊಂಡ 2 ಡಿವಿಡಿಗಳು ಬಿಡುಗಡೆಯಾಗಿವೆ.ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಭೂಕಬಳಿಕೆ ಪ್ರಕರಣಗಳು ದಾಖಲಾಗಿದೆ. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ವಿರುದ್ಧವೇ 7 ದೂರುಗಳು ದಾಖಲಾಗಿದೆ.
ವಂಚನೆ, ಭ್ರಷ್ಟಾಚಾರ, ಭೂ ಕಬಳಿಕೆ ಆಧಾರದ ಮೇಲೆ ದೂರು ಸಲ್ಲಿಕೆಯಾಗಿದ್ದು,ಕೃಷಿ ಭಾಗ್ಯ” ಯೋಜನೆಯ ಹೆಸರಿನಲ್ಲಿ ನಡೆದಿರುವ 800 ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಬಿಬಿಎಂಪಿ ವ್ಯಾಪ್ತಿಯ 189 ಇಂದಿರಾ ಕ್ಯಾಂಟೀನ್ ಗಳ ಗ್ರಾಹಕರ ಹೆಸರಿನಲ್ಲಿ ಪ್ರತೀ ತಿಂಗಳು 11,52,74,273 ರೂಪಾಯಿಗಳಂತೆ 560 ಕೋಟಿ ರೂಪಾಯಿ ಹಣ ಕಬಳಿಸಿರುವ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಕೆ.ಜೆ.ಜಾರ್ಜ್, ಪಾಲಿಕೆಯ ಹಣಕಾಸು ವಿಭಾಗದ ಹಿಂದಿನ ಜಂಟಿ ಆಯುಕ್ತ ಮನೋಜ್ ರಾಜನ್, ರಿವಾರ್ಡ್ ಸಂಸ್ಥೆಗಳು ಭಾಗಿಯಾಗಿವೆ ಯು.ಟಿ ಖಾದರ್ ಮತ್ತು ಸಿದ್ದರಾಮಯ್ಯ ಅವರು ಜೊತೆಗೂಡಿ ಭ್ರಷ್ಟಾಚಾರ ಮಾಡಿ ಹಣ ಕಬಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ ಇಡಿ ಬೀದಿ ದೀಪಗಳ ಅಳವಡಿಕೆ ಯೋಜನೆಯ ಹೆಸರಿನಲ್ಲಿ ನಡೆದಿರುವ1,600 ಕೋಟಿ ರೂಪಾಯಿಗಳ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಕೆ. ಜೆ. ಜಾರ್ಜ್ ಕೈವಾಡ ಇದೆ ಎಂದು ಆರೋಪಿಸಿದರು.ಬಡ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಹಗರಣ ಸೇರಿದಂತೆ ಒಟ್ಟು ನಾಲ್ಕು ರೀತಿಯ ವಿವಿಧ ಯೋಜನೆಗಳ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದರು.
ರಾಬರ್ಟ್ ವಾದ್ರಾ ಪಾಲುದಾರಿಕೆಯ ಡಿಎಲ್‌ಎಫ್ ಸಂಸ್ಥೆಯು ಸುಮಾರು 9,600 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರಿ ಸ್ವತ್ತುಗಳನ್ನು ಕಬಳಿಸಿರುವ ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದ ಕಾಮಗಾರಿಯೊಂದರ ಹೆಸರಿನಲ್ಲಿ ನಕಲಿ ಕೆಲಸ ಮಾಡಿರುವ ಪ್ರಮಾಣಪತ್ರಗಳನ್ನು ಪಡೆದು ಪೂರ್ವ ನಿಗದಿತ ಗುತ್ತಿಗೆದಾರರಿಗೆ ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿ 158 ಕೋಟಿ ಮೊತ್ತದ ಹಗರಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ನರೇಂದ್ರ ಮೋದಿ ಸರ್ಕಾರ ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಡಿಕೊಂಡು ನೂರಾರು ಕೋಟಿ ರೂಪಾಯಿಗಳ ಹಗರಣ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಡೆಸ್ಟ್ ಬೀನ್ ಹಗರಣ, ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಜಿ ಸಚಿವರಾದ ಕೃಷ್ಣ ಭೈರೇಗೌಡ, ಎಂ.ಕೃಷ್ಣಪ್ಪ ಮತ್ತು ಅಂದಿನ ಶಾಸಕರಾದ ಪ್ರಿಯಾ ಕೃಷ್ಣ, ಎನ್. ಎ. ಹ್ಯಾರೀಸ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಭಾಗಿಯಾಗಿದ್ದಾರೆ.