ಬೆಂಗಳೂರು: 2022ರ ಏಪ್ರಿಲ್ 16ರಂದು ನಡೆದ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಸುಮಾರು 40 ಮಂದಿಯನ್ನು ಬಂಧಿಸಲಾಗಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು ಈ ಕುರಿತು ಎಲ್ಲೆಡೆ ಸುದ್ದಿಗಳು ಹರಿದಾಡುತ್ತಿವೆ. ಈ ಪ್ರಕರಣದಲ್ಲಿ 158 ಜನರ ಬಂಧನವಾಗಿದ್ದು, ಅಪ್ರಾಪ್ತರು ಸೇರಿದಂತೆ 7 ಜನರಿಗೆ ಜಾಮೀನು ದೊರಕಿದೆ. ಈಗಾಗಲೇ ಸಾವಿರಾರು ಪುಟಗಳ ಆರೋಪಪಟ್ಟಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಈ ನಡುವೆ ಪ್ರಕರಣದ ಮಾಹಿತಿಯನ್ನು ಸಲ್ಲಿಸುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಿಗೆ ಎಡಿಜಿಪಿ ಸೂಚಿಸಿದ್ದಾರೆ ಎನ್ನಲಾಗಿದೆ.ಇದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಗಳು, ಪ್ರಕರಣಗಳನ್ನು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು.ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಸಾವಿರಾರು ಜನರು ಏಕಕಾಲಕ್ಕೆ ಠಾಣೆ ಮುಂದೆ ಜಮಾಯಿಸಿ ಗಲಭೆ ಸೃಷ್ಟಿಸಿದ್ದರು. ಗಲಭೆ ಸೃಷಿಸಿದವರ ಮೇಲೆ ಒಟ್ಟು 12 ಎಫ್ಐಆರ್ ದಾಖಲಾಗಿದ್ದವು. 158 ಆರೋಪಿಗಳನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.AIMIM ಪಕ್ಷದ ಕಾರ್ಪೋರೇಟರ್ ನಜೀರ್ ಹೊನ್ಯಾಳ ಮತ್ತು 7 ಜನ ಬಾಲಾಪರಾಧಿಗಳಿಗೆ ಮಾತ್ರ ಷರತ್ತುಬದ್ಧ ಜಾಮೀನು ದೊರೆತಿತ್ತು. ಉಳಿದ ಆರೋಪಿಗಳು ಇನ್ನು ಬಳ್ಳಾರಿ ಹಾಗೂ ಕಲಬುರಗಿ ಜೈಲಿನಲ್ಲಿದ್ದಾರೆ.