20 C
Bengaluru
Wednesday, January 22, 2025

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು;ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಹೇಳಿಕೆಯನ್ನು ವಿರೋಧಿಸಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ ನಡೆಸಿದ ಪ್ರಸಂಗ ಲ್ಲಿ ನಡೆಯಿತು.

ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 2004ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡೋಕೆ ಆಗಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಂತರ 2006ರಲ್ಲಿ ರಾಜ್ಯ ಸರ್ಕಾರಗಳು ಅದನ್ನು ಜಾರಿ ಮಾಡಿವೆ ಎಂದರು.

ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 2004ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡೋಕೆ ಆಗಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಂತರ 2006ರಲ್ಲಿ ರಾಜ್ಯ ಸರ್ಕಾರಗಳು ಅದನ್ನು ಜಾರಿ ಮಾಡಿವೆ ಎಂದರು.

ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಹಂತದಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಹೊಸ ಪಿಂಚಣಿ ಯೋಜನೆ ಅಳವಡಿಕೆಯಾಗಿರುವ ಕುರಿತು ಮಾಹಿತಿ ನೀಡಲಾಗಿದೆ. ಹಳೆ ಪಿಂಚಣಿ ವ್ಯವಸ್ಥೆ ಕೇಳಬಾರದು ಎಂಬ ಷರತ್ತನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅದನ್ನು ಒಪ್ಪಿಕೊಂಡೇ ಸೇವೆಗೆ ಸೇರಿರುತ್ತಾರೆ. ಅದನ್ನು ಮರೆತು ಈಗ ಹಳೆ ಪಿಂಚಣಿ ಕೇಳುವುದು ಕಾನೂನು ಸಚಿವರಾಗಿ ನನಗೆ ಸರಿ ಅನಿಸುತ್ತಿಲ್ಲ. ಸರ್ಕಾರಿ ನೌಕರರಿಗೆ ಅದು ಸೌಜನ್ಯವೂ ಅಲ್ಲ ಎಂದರು.

ರಾಜ್ಯ ಸರ್ಕಾರಿ ನೌಕರಿಗೆ ವಾರ್ಷಿಕ 70 ರಿಂದ 80 ಸಾವಿರ ಕೋಟಿ ರೂಪಾಯಿ ನೀಡಲಾಗುತ್ತಿದೆ. ಪಿಂಚಣಿಗಾಗಿಯೇ ಪ್ರತಿ ತಿಂಗಳು 24 ಕೋಟಿಯಷ್ಟು ಖರ್ಚಾಗುತ್ತಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಹಳೆ ಪಿಂಚಣಿ ನೀಡುವುದು ಕಷ್ಟ.
ಬೆಂಗಳೂರಿನಲ್ಲಿ ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರು ಉಪವಾಸ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ ವಾರ ಇದೇ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಹೊಸ ಸಮಿತಿ ರಚನೆ ಮಾಡಿ ಪರಿಶೀಲಿಸುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಈಗ ಸಚಿವರು ಆಗಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಇದು ಸದನದ ಹೊರಗೆ ಬೇರೆ ಸಂದೇಶ ಹೋಗುತ್ತದೆ. ಪ್ರಚೋದನೆಗೆ ಕಾರಣವಾಗುತ್ತದೆ ಎಂದು ಹೇಳಿದರು.

ಇದು ಜೆ.ಸಿ.ಮಾಧುಸ್ವಾಮಿ ಮತ್ತು ಪ್ರಕಾಶ್ ಹುಕ್ಕೇರಿ ನಡುವೆ ಮಾತಿನಚಕಮಕಿಗೆ ಕಾರಣವಾಯಿತು. ಪ್ರಚೋದನೆ ನೀಡುತ್ತಿರುವವರು ನೀವು. ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದೀರಾ. ನಿಮ್ಮದೇ ಸರ್ಕಾರ ಎನ್‍ಪಿಎಸ್ ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದು ಎಂದು ಮಾಧುಸ್ವಾಮಿ ತಿರುಗೇಟು ನೀಡಿದರು.ಆಡಳಿತ ಪಕ್ಷದ ಮತ್ತೊಬ್ಬ ಸದಸ್ಯ ಆಯನೂರು ಮಂಜುನಾಥ್ ಧ್ವನಿಗೂಡಿಸಿ, 2008ರಲ್ಲಿ ನಮ್ಮ ರಾಜ್ಯ ಸರ್ಕಾರಹೊಸ ವ್ಯವಸ್ಥೆ ಜಾರಿಗೆ ತಂದಿದೆ. ಅದೂ ಕೂಡ 2006ರಿಂದ ಪೂರ್ವಾನ್ವಯಗೊಳಿಸಲಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದಿಲ್ಲ, ಬದಲಾಗಿ ಸರ್ಕಾರಿ ನೌಕರರ ಮೇಲೆ ಏರಲಾಗಿದೆ. ಎನ್‍ಪಿಎಸ್ ಅನ್ನು ಹಿಂಪಡೆದು ಒಪಿಎಸ್ ಜಾರಿ ಮಾಡಬೇಕು. ಎನ್‍ಪಿಎಸ್ ಪರಿಷ್ಕರಣೆಗೆ ಈ ಮೊದಲು ರಚಿಸಿದ್ದ ಸಮಿತಿ ಸಭೆಯನ್ನೇ ನಡೆಸಿಲ್ಲಎಂದು ಆಕ್ಷೇಪಿಸಿದರು.

ಆಡಳಿತ ಪಕ್ಷದ ಮತ್ತೊಬ್ಬ ಸದಸ್ಯ ಆಯನೂರು ಮಂಜುನಾಥ್ ಧ್ವನಿಗೂಡಿಸಿ, 2008ರಲ್ಲಿ ನಮ್ಮ ರಾಜ್ಯ ಸರ್ಕಾರಹೊಸ ವ್ಯವಸ್ಥೆ ಜಾರಿಗೆ ತಂದಿದೆ. ಅದೂ ಕೂಡ 2006ರಿಂದ ಪೂರ್ವಾನ್ವಯಗೊಳಿಸಲಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದಿಲ್ಲ, ಬದಲಾಗಿ ಸರ್ಕಾರಿ ನೌಕರರ ಮೇಲೆ ಏರಲಾಗಿದೆ. ಎನ್‍ಪಿಎಸ್ ಅನ್ನು ಹಿಂಪಡೆದು ಒಪಿಎಸ್ ಜಾರಿ ಮಾಡಬೇಕು. ಎನ್‍ಪಿಎಸ್ ಪರಿಷ್ಕರಣೆಗೆ ಈ ಮೊದಲು ರಚಿಸಿದ್ದ ಸಮಿತಿ ಸಭೆಯನ್ನೇ ನಡೆಸಿಲ್ಲಎಂದು ಆಕ್ಷೇಪಿಸಿದರು.

Related News

spot_img

Revenue Alerts

spot_img

News

spot_img