Revenue Facts

ಜ.3ರಂದು ‘ಬಾಗಿ ಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ

ಬೆಂಗಳೂರು;ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು ಕುಂದು-ಕೊರತೆ(Citizens’ complaints are dire) ಆಲಿಸುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ `ಶಿವಕುಮಾ‌ರ್ ಅಧ್ಯಕ್ಷತೆಯಲ್ಲಿ ಜ.3ರಂದು ‘ಬಾಗಿ ಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಾಗರಿಕರು ಸರಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರ ಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಸದರಿ ಕಾರ್ಯಕ್ರಮ ವನ್ನು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲನೇ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎರಡನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬರುವ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ ಸಾಫ್ಟ್‌ವೇರಿನಲ್ಲಿ ದಾಖಲಿಸಲು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ನಾಗರಿಕರಿಂದ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ಸಾಪ್ಟರ್ನಲ್ಲಿ ದಾಖಲಿಸಲು ವೈ-ಫೈ(WiFi), ಕಂಪ್ಯೂಟರ್, ಪ್ರಿಂಟರ್ ಹಾಗೂ ಸ್ಕ್ಯಾನರ್ ವ್ಯವಸೆಯೊಂದಿಗೆ 15 ಕೌಂಟರ್ ಗಳನ್ನು ಸ್ಥಾಪಿಸಲಾಗಿರುತ್ತದೆ.ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್ ಸಿಎಲ್ (metro), ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ(BMTC), ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.

Exit mobile version