25.5 C
Bengaluru
Friday, September 20, 2024

ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ

#Only 4 days # allowed # free update # Aadhaar card

ಬೆಂಗಳೂರು;ಸರ್ಕಾರದ ಯಾವುದೇ ಯೋಜನೆಗೆ ಆಧಾರ್ ಕಾರ್ಡ್(Aadharcard) ಒಂದು ಪ್ರಮುಖ ದಾಖಲೆಯಾಗಿದೆ.ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿಗಳನ್ನು ಉಚಿತವಾಗಿ ಬದಲಾಯಿಸಿಕೊಳ್ಳಲು ಇನ್ನು ನಾಲ್ಕೂ ದಿನ ಮಾತ್ರ ಬಾಕಿ ಇದೆ. ಈ ಹಿಂದೆ ನೀಡಿದ್ದ ಅವಕಾಶವನ್ನು ಡಿ.14ರಂದು ಮುಗಿಯಲಿದೆ. 4 ದಿನಗಳ ಬಳಿಕ ಆಧಾರ್ ಪರಿಷ್ಕರಣೆ ಮಾಡುವುದಿದ್ದರೆ, ಅದಕ್ಕೆ ₹50 ಶುಲ್ಕ ಪಾವತಿಸಬೇಕಾಗುತ್ತದೆ. ಆಧಾರ್ ನಲ್ಲಿರುವ ವಿಳಾಸ, ವಯಸ್ಸು, ಲಿಂಗ, ಗುರುತು, ಮೊಬೈಲ್ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಗಳನ್ನು ಪರಿಷ್ಕರಣೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ 10 ವರ್ಷದ ಹಿಂದಿನ ಮಾಹಿತಿಯ ಅಪ್ಲೇಟ್ ಕಡ್ಡಾಯ ಎನ್ನಲಾಗಿತ್ತು.ನಿಮ್ಮ ಆಧಾರ್ ಕಾರ್ಡ್ 10 ವರ್ಷಗಳಿಗಿಂತ ಹಳೆಯದಾಗಿದ್ದರೆ, ತಕ್ಷಣ ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸುವುದು ಕಡ್ಡಾಯವಾಗಿದೆ. ಉಚಿತ ಆಧಾರ್ ನವೀಕರಣ ಪಡೆಯಲು ಕೊನೆಯ ದಿನಾಂಕವನ್ನು ಡಿಸೆಂಬರ್ 14 ಎಂದು ನಿಗದಿಪಡಿಸಲಾಗಿದೆ.

ಯುಐಡಿಎಐ(UIDAI) ವೆಬ್ಸೈಟ್ ಅಥವಾ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಈ ಅವಕಾಶದ ಲಾಭವನ್ನು ಪಡೆಯಿರಿ, ಅಲ್ಲಿ ಸೇವೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ.ಮಕ್ಕಳ ಆಧಾರ್ ವಿವರಗಳನ್ನು ನವೀಕರಿಸಲು ಸರ್ಕಾರ ಈಗ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಈ ಮಾರ್ಗಸೂಚಿಗಳ ಪ್ರಕಾರ, ಮಗುವಿಗೆ 15 ವರ್ಷ ವಯಸ್ಸಾದಾಗ ನವೀಕರಣಕ್ಕಾಗಿ ಎಲ್ಲ ಬಯೋಮೆಟ್ರಿಕ್‌ಗಳನ್ನು ಒದಗಿಸಬೇಕು. ಇದು ಮಗುವಿನ ಆಧಾರ್ ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತದೆ.

ಆಧಾರ್ ನಲ್ಲಿ ಮಾಹಿತಿ ಅಪ್ಡೇಟ್ ಮಾಡುವುದು ಹೇಗೆ?

*ಯುಐಡಿಎಐ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. https://myaadhaar.uidai.gov.in ಮೇಲೆ ಕ್ಲಿಕ್ ಮಾಡಿ.

* My Aadhar ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಡ್ರಾಪ್-ಡೌನ್ ಮೆನುವಿನಿಂದ “Update Your Aadhaar” ಆಯ್ಕೆ ಮಾಡಿಆ ಬಳಿಕ ‘Update Aadhaar’ಆಯ್ಕೆ ಮಾಡಿ

*ನಿಮ್ಮ ಆಧಾರ್ ಸಂಖ್ಯೆ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ

* ಬಳಿಕ ‘Send OTP’ಬಟನ್ ಮೇಲೆ ಕ್ಲಿಕ್ ಮಾಡಿ

* ನಿಮ್ಮ ಮೊಬೈಲ್ ಸಂಖ್ಯೆಗೆ ಬಂದಿರುವ ಒಟಿಪಿ ನಮೂದಿಸಿ

*Login ಬಟನ್ ಮೇಲೆ ಕ್ಲಿಕ್ ಮಾಡಿ.ನಿಮಗೆ ಯಾವ ಮಾಹಿತಿಯನ್ನು ನವೀಕರಿಸಬೇಕು ಅದನ್ನು ಆಯ್ಕೆ ಮಾಡಿ. ಉದಾಹರಣೆಗೆ ವಿಳಾಸ ಬದಲಾಯಿಸಬೇಕಿದ್ದರೆ ‘Address Update’ ಆಯ್ಕೆ ಮಾಡಿ

* ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ

* ಬಳಿಕ ‘Submit’ಬಟನ್ ಮೇಲೆ ಕ್ಲಿಕ್ ಮಾಡಿ.ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ (URN) ಬರುತ್ತದೆ

*15 ದಿನಗಳೊಳಗೆ ನಿಮ್ಮ ವಿಳಾಸ ಅಥವಾ ಇತರ ಯಾವುದೇ ಮಾಹಿತಿ ಆಧಾರ್ ನಲ್ಲಿ ಅಪ್ಡೇಟ್ ಆಗುತ್ತದೆ.

Related News

spot_img

Revenue Alerts

spot_img

News

spot_img