Revenue Facts

ರೈತರಿಂದಲೇ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ಸಮೀಕ್ಷೆಗೆ ಅವಕಾಶ

#crop survey #Farmers #mobileapplication

ಬೆಂಗಳೂರು, ಆ. 25 :ಕೃಷಿ ಇಲಾಖೆಯ 2023-24ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಆ್ಯಪ್​ನ್ನು ಗೂಗಲ್ ಪ್ಲೇ ಸ್ಟೋರ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಆ್ಯಪ್​ನ ವಿಶೇಷತೆ ಏನೆಂದರೆ ಈ ಆ್ಯಪ್ ಮೂಲಕ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನ ಸ್ವಂತ ರೈತರೇ ಸಮೀಕ್ಷೆ ಮಾಡಬಹುದಾಗಿದೆ. ಜೊತೆಗೆ ಸಮೀಕ್ಷೆಯ ಸಂಪೂರ್ಣ ವಿವರಗಳನ್ನು ಆ್ಯಪ್​ನಲ್ಲಿ ಅಪ್ಲೋಡ್ ಮಾಡಬಹುದಾಗಿದೆ.ಗೂಗಲ್ ಪ್ಲೇ ಸ್ಟೋರ್​ನಲ್ಲಿ ಆ್ಯಪ್​ನ್ನು ಡೌನ್ಲೋಡ್ ಮಾಡಿಕೊಂಡ ನಂತರ ತಮ್ಮ ಆಧಾರ್ ಕಾರ್ಡ್ ಮೂಲಕ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ನೋಂದಾಯಿಸಿಕೊಳ್ಳಬೇಕು.ನಂತರ ರೈತರು ತಮ್ಮ ಜಮೀನಿನ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ತದನಂತರ ತಮ್ಮ ಜಮೀನುಗಳಿಗೆ ತೆರಳಿ ಸಂಬಂಧಪಟ್ಟ ಸರ್ವೆ ನಂಬರ್​ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ಅಪ್ಲೋಡ್ ಮಾಡಬಹುದಾಗಿದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಆಯಪ್ ಡೌನ್ಲೋಡ್ ಮಾಡಿಕೊಂಡು, ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಬೆಳೆ ಸಮೀಕ್ಷೆ ಯನ್ನು ಆಯ್ಕೆ ಮಾಡಬೇಕು.ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದಾಗ, ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆಪ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ನಂತರ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು, ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್ಲೋಡ್ ಮಾಡಬೇಕು. ಸರ್ವೇ ನಂಬರ್‌ನ ಗಡಿ ರೇಖೆ ಒಳಗೆ ನಿಂತು ಬೆಳೆಗಳ ವಿವರ ದಾಖಲಿಸಿ ಛಾಯಾಚಿತ್ರ ತೆಗೆದು ಅಪ್‌ಲೋಡ್ ಮಾಡಬೇಕು. ಆಗ ಸಮೀಕ್ಷೆ ಪೂರ್ಣಗೊಳ್ಳುತ್ತದೆ,

Exit mobile version