ಬೆಂಗಳೂರು;ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಬೇಕು. ಆಗ ಮಾತ್ರ ಮಕ್ಕಳು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ. ಶಾಲೆಗೆ ಸೇರಲು ಬಯಸುವ ಮಕ್ಕಳ ವಯೋಮಿತಿ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು ಪ್ರಾಥಮಿಕ ಶಾಲೆಯ ಒಂದನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಲು ನಿಗಧಿಗೊಳಿಸಿರುವ ವಯೋಮಿತಿಯಲ್ಲಿ ಸ್ಪಷ್ಟತೆ ಇಲ್ಲದಿರುವುದನ್ನು ಗಮನಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಏಕರೂಪ ವಯೋಮಿತಿಯನ್ನು ನಿರ್ಧರಿಸಿ ಸ್ಪಷ್ಟ ಪಡಿಸಿದೆ.
ರಾಜ್ಯ ಸರ್ಕಾರ ಕಳೆದ ಜು.26ರಂದು ಹೊರಡಿಸಿದ್ದ ಆದೇಶ ಪ್ರತಿಯಲ್ಲಿ ಪ್ರಸಕ್ತ ಸಾಲಿನಿಂದಲೇ 6 ವರ್ಷ ಪೂರ್ಣಗೊಳ್ಳಬೇಕು ಎಂಬ ಮಾಹಿತಿ ನೀಡಿತ್ತು.ಇದೀಗ ತಿದ್ದುಪಡಿ ಆದೇಶ ಹೊರಡಿಸಿದೆ, ಇದು 2025-26ರ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ ಎಂದು ತಿಳಿಸಿದೆ.
ಶಿಕ್ಷಣ ಇಲಾಖೆ ಮೂಲಕ ಹೊರ ಬಿದ್ದಿರುವ ಆದೇಶದ 3ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಿ ಆದೇಶಿಸಿದೆ
ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಈ ಆದೇಶ ಜೂನ್ 2017 ರಿಂದ ಕಟ್ಟು ನಿಟ್ಟಾಗಿ ಜಾರಿಗೆ ಬರಲಿದೆ. 2016- 17ನೆ ಸಾಲಿನಲ್ಲಿ ಈಗಾಗಲೆ ದಾಖಲಾಗಿರುವ ಮಕ್ಕಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 10ನೆ ತರಗತಿ ಪೂರ್ಣಗೊಳಿಸುವ ವೇಳೆಗೆ ವಿದ್ಯಾರ್ಥಿ ವಯಸ್ಸು 16 ವರ್ಷ ತುಂಬಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಯಮಗಳ ಪ್ರಕಾರ, 16 ವರ್ಷ ಪೂರ್ಣಗೊಂಡಿದ್ದರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಸಾಧ್ಯ.